Site icon SportsKannada ಸ್ಪೋರ್ಟ್ಸ್ ಕನ್ನಡ

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ವತಿಯಿಂದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಪಂದ್ಯಾವಳಿ ಇದೇ ಮೇ 9 ಮತ್ತು 10, 2026 ರಂದು ಸುರತ್ಕಲ್‌ನ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ ಭರ್ಜರಿಯಾಗಿ ನಡೆಯಲಿದೆ.

ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಅವರ ಆಶ್ರಯದಲ್ಲಿ ನಡೆಯುತ್ತಿರುವ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಈ ಟೂರ್ನಿ ಇದೀಗ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಆಯೋಜಕರು ಐದನೇ ಬಾರಿಗೆ ಯಶಸ್ವಿಯಾಗಿ ಈ ಹಿರಿಯರ ಕ್ರಿಕೆಟ್ ಹಬ್ಬವನ್ನು ಸಂಘಟಿಸುತ್ತಿದ್ದಾರೆ. ಕಳೆದ ವರ್ಷಗಳ ಯಶಸ್ಸಿನ ಬೆನ್ನಲ್ಲೇ ಈ ಬಾರಿಯೂ ಇನ್ನಷ್ಟು ಅದ್ಧೂರಿಯಾಗಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ.

“ಲೆಜೆಂಡ್ಸ್ ಆರ್ ಮೇಡ್ ನಾಟ್ ಬೋರ್ನ್” ಎಂಬ ಘೋಷವಾಕ್ಯದೊಂದಿಗೆ ನಡೆಯುವ ಈ ಲೀಗ್‌ನಲ್ಲಿ ಹಲವು ಬಲಿಷ್ಠ ತಂಡಗಳು ಭಾಗವಹಿಸಲಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ರೋಚಕ ಪಂದ್ಯಗಳನ್ನು ಕಾಣುವ ಅವಕಾಶ ದೊರೆಯಲಿದೆ.

ಪ್ರಥಮ ಬಹುಮಾನವಾಗಿ ಟ್ರೋಫಿಯೊಂದಿಗೆ ₹1,00,005/- ನಗದು, ದ್ವಿತೀಯ ಬಹುಮಾನವಾಗಿ ಟ್ರೋಫಿಯೊಂದಿಗೆ ₹50,005/- ನಗದು ಹಾಗೂ ತೃತೀಯ ಮತ್ತು ಚತುರ್ಥ ಬಹುಮಾನವಾಗಿ ಟ್ರೋಫಿ ನೀಡಲಾಗುತ್ತದೆ. ಜೊತೆಗೆ ಪಂದ್ಯಶ್ರೇಷ್ಠರಿಗೆ ವಿಶೇಷ ಬಹುಮಾನ ಟ್ರೋಫಿಯೊಂದಿಗೆ ನೀಡಲಾಗುತ್ತದೆ.

ಕ್ರಿಕೆಟ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9945913163, 8660757075, 9986560895 ಹಾಗೂ 8073951274 ಸಂಖ್ಯೆಯನ್ನು ಸಂಪರ್ಕಿಸಬಹುದು. ಪಂದ್ಯಾವಳಿಯ ನೇರ ಪ್ರಸಾರ ಯೂ ಟ್ಯೂಬ್ ಮೂಲಕ ನಡೆಯಲಿದೆ.

Exit mobile version