ಬ್ರಹ್ಮಾವರ : ಹಲುವಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಉಡುಪಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಲುವಳ್ಳಿ ಸಂಯುಕ್ತ ಆಶ್ರಯದಲ್ಲಿ ಮಂದಾರ್ತಿ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಪಂದ್ಯಾಟ ಮತ್ತು ಕ್ರೀಡಾಕೂಟ ನಡೆಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ ಕ್ರೀಡಾಕೂಟ ಉದ್ಘಾಟಿಸಿದರು. ಉಡುಪಿ ಶಾಸಕ ರಘುಪತಿ ಭಟ್, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ರಘುರಾಮ ಶೆಟ್ಟಿ ಕನ್ನಾರು, ಕರ್ಜೆ ಪ್ರೌಢಶಾಲೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಮೇಶ್ ಭಟ್, ನೀರಾವರಿ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಧನಂಜಯ ಅಮೀನ್, ಚಂದ್ರಶೇಖರ ಶೆಟ್ಟಿ ಮೂಡೂರು, ಶಿವರಾಮ ಶೆಟ್ಟಿ ಕೋಟಂಬೈಲು, ದೈಹಿಕ ಶಿಕ್ಷಣಾಧಿಕಾರಿ ಭುಜಂಗ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುಜಾತಾ ಶೆಟ್ಟಿ, ಉದಯ್ ಎಚ್.ಟಿ., ಶೇಖರ್ ನಾಯ್ಕ್ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸುಮತಿ ಸ್ವಾಗತಿಸಿದರು. ಶಿಕ್ಷಕ ಪ್ರಶಾಂತ ಶೆಟ್ಟಿ ಹಾವಂಜೆ ನಿರೂಪಿಸಿದರು. ಸಹ ಶಿಕ್ಷಕ ರೋಹಿತ್ ಶೆಟ್ಟಿ ಸಹಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸುಮನಾ ವಂದಿಸಿದರು.
ಮಳೆಯ ನಡುವೆಯೂ ಉತ್ಸಾಹ : ಬ್ರಹ್ಮಾವರ ಪರಿಸರದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಭಾರಿ ಮಳೆ ಸುರಿಯುತ್ತಿದ್ದರೂ ಮಳೆಯನ್ನು ಲೆಕ್ಕಿಸದೇ ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ವಾಲಿಬಾಲ್, ಕೊಕ್ಕೊ, ಕಬಡ್ಡಿ, ಥ್ರೋಬಾಲ್ ಕ್ರೀಡೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.