ಸ್ಪೋರ್ಟ್ಸ್ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಚೆಸ್ ಪಂದ್ಯಾವಳಿ ಆರಂಭ

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಚೆಸ್ ಪಂದ್ಯಾವಳಿ ಆರಂಭ

-

- Advertisment -spot_img
ಕಶ್ವಿ ಚೆಸ್ ಸ್ಕೂಲ್(ರಿ) ಕುಂದಾಪುರ ಇವರ ಆಯೋಜಕತ್ವದಲ್ಲಿ ಕಶ್ವಿಸ್ ಮೊದಲನೆಯ ಅಂತರಾಷ್ಟ್ರೀಯ ಓಪನ್ ಫಿಡೆ ರೇಟೆಡ್ ರಾಪಿಡ್ ಚೆಸ್ ಟೂರ್ನಮೆಂಟ್ 2023 ಮಂಗಳೂರಿನ ಇಂಡಿಯಾನ ಕನ್ವೆನ್ಷನ್ ಸೆಂಟರ್ ನಲ್ಲಿ ಶನಿವಾರ ಡಿಸೆಂಬರ್ 9 ರಂದು ಆರಂಭಗೊಂಡಿತು.
ಎರಡು ದಿನಗಳ ಈ ಪಂದ್ಯಾಕೂಟದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರ 400ಕ್ಕೂ ಹೆಚ್ಚು ಚೆಸ್ ಆಟಗಾರರು ಭಾಗವಹಿಸಿದ್ದಾರೆ. ಸುಮಾರು 26 ಲಕ್ಷ ಮೊತ್ತದ ಬಹುಮಾನ ಅಲ್ಲದೇ ವಿವಿಧ ವಿಭಾಗಗಳಲ್ಲಿ ಗೆದ್ದ ವಿಜೇತರಿಗೆ ಬಹುಮಾನ ನೀಡಲಾಗುವುದು.
ಪಂದ್ಯಾಕೂಟವನ್ನು ಮಂಗಳೂರಿನ ರಾವ್ಸ್ ಚೆಸ್ ಕಾರ್ನರ್ ನ ಸ್ಥಾಪಕ ಹಾಗೂ ಅಂತರಾಷ್ಟ್ರೀಯ ಮಾಸ್ಟರ್ ಶರಣ್ ರಾವ್ ಉದ್ಘಾಟಿಸಿದರು. ನಂತರ ಮಾತನಾಡುತ್ತಾ ಇಂತಹ ಪಂದ್ಯಾವಳಿಯಿಂದ ಸ್ಥಳೀಯ ಆಟಗಾರರಿಗೆ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿ ಹಿರಿಯ ಅನುಭವಿ ಆಟಗಾರರೊಂದಿಗೆ ಆಟವಾಡಲು ಇದೊಂದು ಉತ್ತಮ‌ವಾದ ವೇದಿಕೆ. ಮಂಗಳೂರಿನಲ್ಲಿ ಇಂತಹ ಚೆಸ್ ಪಂದ್ಯಾವಳಿಯನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಪಂದ್ಯಾವಳಿ ಮುಂದಿನ ದಿನಗಳಲ್ಲಿ ಹೆಚ್ಚಾಗಿ ನಡೆಯಲಿ  ಎಂದು ‌ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಮೇಶ ಕೋಟೆ, ಅಧ್ಯಕ್ಷರು, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್(ರಿ), ಸದಾಶಿವ ಶೆಟ್ಟಿ, ಪಂದ್ಯಾವಳಿಯ ಅಧ್ಯಕ್ಷ ಸದಾಶಿವ ಶೆಟ್ಟಿ, ಕಶ್ವಿ ಚೆಸ್ ಸ್ಕೂಲ್ ಸ್ಥಾಪಕ ಹಾಗೂ ಪಂದ್ಯಾವಳಿಯ ಆಯೋಜಕ ನರೇಶ್ ಬಿ ಉಪಸ್ಥಿತರಿದ್ದರು.
ಅವಿನಾಶ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಭೂಮಿಕಾ ಭಟ್ ಪ್ರಾರ್ಥಿಸಿದರು, ಕಶ್ವಿ ಚೆಸ್ ಸ್ಕೂಲ್  ಕಾರ್ಯದರ್ಶಿ ಪುರುಷೋತ್ತಮ ಕಾಮತ್ ದನ್ಯವಾಧಗೈದರು. ವಸಂತ್ ಬಿ ಅವರ ನೇತೃತ್ವದ ಸುಮಾರು 7 ತೀರ್ಪುಗಾರರ ತಂಡ  ಪಂದ್ಯಾವಳಿಯನ್ನು‌ ನಿರ್ವಹಿಸುತ್ತಿದ್ದಾರೆ.
ಇಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ  ಎನ್ ಸಂತೋಷ ಹೆಗ್ಡೆ, ಮಾಜಿ ಲೋಕಾಯುಕ್ತರು, ಪ್ರವೀಣ ತಿಪ್ಸೆ, ಅಂತರಾಷ್ಟ್ರೀಯ ಗ್ರಾಂಡ್ ಮಾಸ್ಟರ್ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕ್ರತ, ಯು.ಟಿ. ಖಾದರ್, ಸಭಾದ್ಯಕ್ಷರು, ಕರ್ನಾಟಕ ವಿಧಾನಸಭೆ, ಜಯಪ್ರಕಾಶ ಹೆಗ್ಡೆ, ಹಿಂದುಳಿದ ಆಯೋಗದ ಅದ್ಯಕ್ಷರು, ಪ್ರಮೋದ ಮದ್ವರಾಜ, ಮಾಜಿ ಮಂತ್ರಿಗಳು, ಕರ್ನಾಟಕ ಸರ್ಕಾರ, ಇನಾಯತ್ ಅಲಿ, ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಮುಂತಾದವರು ಭಾಗವಹಿಸಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four + 19 =

Latest news

Chicken Road: The Fast‑Paced Crash Game That Keeps You on the Edge

When you think of a game that’s all about quick decisions and instant thrills, Chicken Road pops up as a...

Chicken Road 2: Schnell‑Paced Crash‑Action für Schnelle Gewinne

Chicken Road 2 – Ein Schnellfeuer‑Arcade‑Crash‑SpielChicken Road 2 lädt dich auf eine cartoonartige Autobahn ein, auf der eine entschlossene Huhn...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...
- Advertisement -spot_imgspot_img

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

Must read

- Advertisement -spot_imgspot_img

You might also likeRELATED
Recommended to you