ಕ್ರಿಕೆಟ್ಸೌದಿ ಅರೇಬಿಯಾ-ಜಿದ್ದಾಜಿದ್ದಿನ ಜೆದ್ದಾ ಎ.ಟಿ.ಎಸ್ ಕಪ್-2020 ಪ್ಯಾರಾಮೌಂಟ್ ರಿಯಾದ್ ಮಡಿಲಿಗೆ

ಸೌದಿ ಅರೇಬಿಯಾ-ಜಿದ್ದಾಜಿದ್ದಿನ ಜೆದ್ದಾ ಎ.ಟಿ.ಎಸ್ ಕಪ್-2020 ಪ್ಯಾರಾಮೌಂಟ್ ರಿಯಾದ್ ಮಡಿಲಿಗೆ

-

- Advertisment -spot_img
ಸೌದಿ ಅರೇಬಿಯಾದ ಪ್ರತಿಷ್ಟಿತ ಎ.ಟಿ.ಎಸ್.ಜೆದ್ದಾ ತಂಡವು ಇತ್ತೀಚೆಗಷ್ಟೇ ಮರ್ಸಲ್ ನ ಬಿ.ಎಮ್‌.ಟಿ ಅಂಗಣದಲ್ಲಿ ಆಯೋಜಿಸಿದ್ದ ಹೊನಲು ಬೆಳಕಿನ
ಎ.ಟಿ.ಎಸ್.ಕಪ್-2020 ಪಂದ್ಯಾವಳಿಯ ಪ್ರಶಸ್ತಿಯನ್ನು ಪ್ಯಾರಾಮೌಂಟ್ ರಿಯಾದ್ ತಂಡ ಜಯಿಸಿದೆ.
ಜಿದ್ದಾ ಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಜೆದ್ದಾ ಪ್ರತಿಷ್ಠಿತ ಎ‌.ಟಿ‌.ಎಸ್ ಕಪ್ ಗಾಗಿ 12 ತಂಡಗಳು ಭಾಗವಹಿಸಿತ್ತು.ಲೀಗ್ ಕಮ್ ನಾಕೌಟ್ ಹಂತದ ಹೋರಾಟದ ಬಳಿಕ ಉಪಾಂತ್ಯ ಪಂದ್ಯಗಳಲ್ಲಿ ಕಯಾನಿ ಇಲೆವೆನ್ ತಂಡ ಅಝೀಝಿಯಾ ಡೆಕ್ಕನ್ ತಂಡವನ್ನು ಹಾಗೂ ಪ್ಯಾರಾಮೌಂಟ್ ರಿಯಾದ್ ಯಂಗ್ ಸ್ಟಾರ್ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿದ್ದವು.
ರೋಚಕವಾಗಿ ಸಾಗಿದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಕಯಾನಿ ಇಲೆವೆನ್ ನಿಗದಿತ 8 ಓವರ್ ಗಳಲ್ಲಿ 84 ರನ್ ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿತ್ತು.ಚೇಸಿಂಗ್ ವೇಳೆ
ಪ್ಯಾರಾಮೌಂಟ್ ರಿಯಾದ್ ತಂಡದ ಇಲ್ಯಾಸ್ ಹಾಗೂ ಸಲ್ಮಾನ್ ಬ್ಯಾಟಿಂಗ್ ಸಾಹಸದಿಂದ ಕೇವಲ 6.5 ಓವರ್ ಗಳಲ್ಲಿ ಗುರಿಯನ್ನು ಬೆಂಬತ್ತಿ ಎ‌.ಟಿ.ಎಸ್ ಕಪ್-2020 ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
 ಪ್ರಥಮ ಪ್ರಶಸ್ತಿ ವಿಜೇತ ಪ್ಯಾರಾಮೌಂಟ್ ರಿಯಾದ್ 5,555 ರಿಯಲ್ ನಗದು ಹಾಗೂ ರನ್ನರ್ ಅಪ್ ಕಯಾನಿ ಇಲೆವೆನ್ ನಗದು 3,333 ರಿಯಲ್ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ
ಕ್ರಮವಾಗಿ ಬೆಸ್ಟ್ ಬ್ಯಾಟ್ಸ್‌ಮನ್ ಕಯಾನಿ ಇಲೆವೆನ್ ನ ಕಾಶಿಫ್,ಬೆಸ್ಟ್ ಬೌಲರ್ ಪ್ಯಾರಾಮೌಂಟ್ ನ ನೌಮಾನ್ ಹಾಗೂ ಫೈನಲ್ ನ ಪಂದ್ಯಶ್ರೇಷ್ಟ ಹಾಗು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪ್ಯಾರಾಮೌಂಟ್ ರಿಯಾದ್ ತಂಡದ ಸಲ್ಮಾನ್ ಪಡೆದುಕೊಂಡರು.ಸಮಾರೋಪ ಸಮಾರಂಭದಲ್ಲಿ ನಡೆದ ಲಕ್ಕಿ ಡ್ರಾ ನಲ್ಲಿ ಮೂಲ್ಕಿಯ ಶಬ್ಬೀರ್ ಅಹಮದ್ ಇವರಿಗೆ ಐ ಫೋನ್ 12 ಪ್ರೋ ಮ್ಯಾಕ್ಸ್ ಬಹುಮಾನ‌ ದೊರೆತಿರುತ್ತದೆ.
ಪಂದ್ಯಾವಳಿಯ
ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕನ್ನಡಿಗರ ಹೆಮ್ಮೆಯ ಕ್ರೀಡಾ ವೆಬ್ಸೈಟ್ ಸ್ಪೋರ್ಟ್ಸ್ ಕನ್ನಡ ಕಾರ್ಯ ನಿರ್ವಹಿಸಿದ್ದು,ಮೊತ್ತ ಮೊದಲ ಬಾರಿಗೆ ಕರ್ನಾಟಕದ M.Sports ಯೂ ಟ್ಯೂಬ್ ಚಾನೆಲ್ ಈ ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಿದ್ದು, ದೇಶ,ವಿದೇಶದಾದ್ಯಂತ ಸಹಸ್ರಾರು ಕ್ರಿಕೆಟ್ ಅಭಿಮಾನಿಗಳು ಪಂದ್ಯಾಟವನ್ನು ವೀಕ್ಷಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

seven − six =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you