ಕ್ರಿಕೆಟ್ಕುಂದಾಪುರದ ಯುವಕ ಪೃಥ್ವಿರಾಜ್ ಶೆಟ್ಟಿ ಕಿವುಡರ T20 ಕ್ರಿಕೆಟ್ ವಿಶ್ವಕಪ್‌ಗೆ ...

ಕುಂದಾಪುರದ ಯುವಕ ಪೃಥ್ವಿರಾಜ್ ಶೆಟ್ಟಿ ಕಿವುಡರ T20 ಕ್ರಿಕೆಟ್ ವಿಶ್ವಕಪ್‌ಗೆ ಭಾರತ ತಂಡಕ್ಕೆ ಆಯ್ಕೆ

-

- Advertisment -spot_img
ಈ ವರ್ಷದ ಕೊನೆಯಲ್ಲಿ ಕತಾರ್‌ನಲ್ಲಿ ನಡೆಯಲಿರುವ ಕಿವುಡರ ಟಿ20 ಕ್ರಿಕೆಟ್‌ಗೆ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ.  ತಂಡದಲ್ಲಿ ತಾಲೂಕಿನ ಪೃಥ್ವಿರಾಜ್ ಶೆಟ್ಟಿ ಹುಂಚನಿ ಆಯ್ಕೆಯಾಗಿದ್ದಾರೆ.
ಇವರು ರಾಷ್ಟ್ರೀಯ ಕಿವುಡರ ತಂಡದಲ್ಲಿರುವ ಕರ್ನಾಟಕದ ಏಕೈಕ ಆಟಗಾರ.
ಪೃಥ್ವಿರಾಜ್ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಸುಭಾಶ್ಚಂದ್ರ ಶೆಟ್ಟಿ ಮತ್ತು ಶೀಲಾವತಿ ದಂಪತಿಯ ಪುತ್ರ. ಹುಟ್ಟು ಕಿವುಡನಾಗಿದ್ದರೂ, ಕ್ರಿಕೆಟ್ ಆಡುವ ಕನಸನ್ನು ನನಸಾಗಿಸಿಕೊಳ್ಳಲು ಅದು ಅಡ್ಡಿಯಾಗಲಿಲ್ಲ.
ಪೃಥ್ವಿರಾಜ್ ಮೂಡುಬಗೆ ಅಂಪಾರುವಿನ ವಿಶೇಷ ಚೇತನ ಮಕ್ಕಳ ವಾಗ್ಜ್ಯೋತಿ ಶಾಲೆಯ ಹಳೆ ವಿದ್ಯಾರ್ಥಿ.ಟೊರ್ಪೆಡೋಸ್ ಮತ್ತು ಚಕ್ರವರ್ತಿ ಕುಂದಾಪುರ ಕ್ರಿಕೆಟ್ ತಂಡದ ಅರೆಕಾಲಿಕ ತರಬೇತುದಾರರಾಗಿ ಕೆಲಸ ಮಾಡುತ್ತಾರೆ. ಇವರು ಕರ್ನಾಟಕ ವಿಕಲಚೇತನರ ಕ್ರಿಕೆಟ್ ತಂಡದ ನಾಯಕರಾಗಿದ್ದರು. 32 ವರ್ಷದ ಪೃಥ್ವಿರಾಜ್ ಭಾರತ ತಂಡದ ಪ್ರಮುಖ ವೇಗದ ಬೌಲರ್ ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್. ಇತ್ತೀಚೆಗೆ ನಡೆದ ತ್ರಿಕೋನ ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.
ಕಿವುಡರ T20 ಕ್ರಿಕೆಟ್ ಪಂದ್ಯ ಡಿಸೆಂಬರ್ 1 ರಿಂದ 12 ರವರೆಗೆ ಕತಾರ್ ರಾಜಧಾನಿ ದೋಹಾದಲ್ಲಿ  ನಡೆಯಲಿದೆ. ವೀರೇಂದ್ರ ಸಿಂಗ್ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ, ಆಲ್ ರೌಂಡರ್ ಸಾಯಿ ಆಕಾಶ್ ಉಪನಾಯಕ. ಭಾರತ ತಂಡದಲ್ಲಿರುವ ಏಕೈಕ ಕನ್ನಡಿಗ ಪೃಥ್ವಿರಾಜ್  ಕತಾರ್ ಗೆ ತೆರಳಿ  ಆಡುವ ಇಲೆವೆನ್ ನಲ್ಲಿ ಸ್ಥಾನ ಪಡೆದು ಭಾರತ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

13 − 10 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you