ಗೆಲುವಿನ ಹಾದಿಗೆ ಮರಳಿದ ಬೆಂಗಳೂರು! ರಾಜಸ್ಥಾನವನ್ನು ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ RCB!

ಗೆಲುವಿನ ಹಾದಿಗೆ ಮರಳಿದ ಬೆಂಗಳೂರು! ರಾಜಸ್ಥಾನವನ್ನು ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ RCB!

ಗೆಲುವಿನ ಹಾದಿಗೆ ಮರಳಿದ ಬೆಂಗಳೂರು! ರಾಜಸ್ಥಾನವನ್ನು ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ RCB!

RRv/sRCB: ಇಂದಿನ ಐಪಿಎಲ್ ಪಂದ್ಯದಲ್ಲಿ ಸಂಜು ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಮತ್ತು ರಜತ್ ಪಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಆಡಿದವು. ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಮುಂದೆ ಚೇಸಿಂಗ್ ಮಾಡಿದ ಆರ್‌ಸಿಬಿ, ಗೆಲ್ಲಲು 20 ಓವರ್‌ಗಳಲ್ಲಿ 174 ರನ್‌ಗಳ ಅವಶ್ಯಕತೆಯಿತ್ತು.

ಬೆಂಗಳೂರಿನ ಆರಂಭಿಕ ಆಟಗಾರ ಫಿಲಿಪ್ ಸಾಲ್ಟ್ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್‌ಗಳಿಂದ 65 ರನ್ ಗಳಿಸಿದರು. ನಂತರ ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ 62 ರನ್ ಗಳಿಸಿದರು. ಪಡಿಕ್ಕಲ್ 28 ಎಸೆತಗಳಲ್ಲಿ 40 ರನ್ ಗಳಿಸಿದರು ಮತ್ತು ಈ ಜೋಡಿ ಆರ್‌ಸಿಬಿಯನ್ನು ಕೊನೆಯವರೆಗೂ ಗೆಲುವಿನತ್ತ ಮುನ್ನಡೆಸಿತು.

ಕೊನೆಯಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 17.3 ಓವರ್‌ಗಳಲ್ಲಿ ಅಬ್ಬರದ ಪ್ರದರ್ಶನ ನೀಡುವ ಮೂಲಕ ಈ ಗುರಿಯನ್ನು ತಲುಪಿತು. ರಾಜಸ್ಥಾನ ರಾಯಲ್ಸ್ ಶರಣಾಯಿತು..

ರಾಜಸ್ಥಾನ ರಾಯಲ್ಸ್ ತಂಡವನ್ನು ಅವರ ತವರು ನೆಲದಲ್ಲಿ 9 ವಿಕೆಟ್‌ಗಳಿಂದ ಸೋಲಿಸಿತು. ಏಪ್ರಿಲ್ 10 ರಂದು ದೆಹಲಿ ವಿರುದ್ಧ ಸೋತ ನಂತರ, ಆರ್‌ಸಿಬಿ ರಾಜಸ್ಥಾನವನ್ನು ಸೋಲಿಸುವ ಮೂಲಕ ಗೆಲುವಿನ ಹಾದಿಗೆ ಮರಳಿತು.

Leave a Reply

Your email address will not be published. Required fields are marked *