ಡೆಹ್ರಾಡೂನ್: ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದ ರಿಷಭ್ ಪಂತ್ ಸ್ಥಿತಿ ಗಂಭೀರವಾಗಿದೆ.
ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ಲಾಸ್ಟಿಕ್ ಸರ್ಜರಿಯ (Plastic Surgery) ಅವಶ್ಯಕತೆ ಇರುವುದಾಗಿ ವರದಿಯಾಗಿದೆ.
ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಬೆನ್ನು, ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಸುಶೀಲ್ ನಗರ್ ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಭ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ. ನಂತರ ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಅದೇ ವೇಳೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.