ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ


ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌ ಆಗಿ ಆಯ್ಕೆಯಾಗಿರುವುದು ಜಿಲ್ಲೆಯ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ವಿಷಯವಾಗಿದೆ.

ಇವರು ಉಡುಪಿ ನಗರದ ಇಎಂಎಚ್‌ಎಸ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಶ್ರೀ ಹರೀಶ್ ಭಟ್ ಹಾಗೂ ಶ್ರೀಮತಿ ಮಂಜುಳಾ ಭಟ್ ದಂಪತಿಯ ಪುತ್ರಿಯಾಗಿದ್ದಾರೆ. ಬಾಲ್ಯದಿಂದಲೇ ಕ್ರಿಕೆಟ್‌ ಮೇಲಿನ ಅಪಾರ ಆಸಕ್ತಿ ಮತ್ತು ನಿರಂತರ ಪರಿಶ್ರಮದಿಂದ ಈ ಸಾಧನೆಯನ್ನು ಮಾಡಿದ್ದಾರೆ.

ಸಮೃದಿ ಇವರು ಅಕ್ಷಯ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟ್ ಕೋಚಿಂಗ್ ಪಡೆಯುತ್ತಿದ್ದು ದಯಾನಂದ ಬಂಗೇರ ಇವರ ಶಿಷ್ಯೆಯಾಗಿ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಸಮೃದ್ಧಿ ಅವರ ಆಯ್ಕೆ ಯುವ ಕ್ರೀಡಾಪಟುಗಳಿಗೆ ಸ್ಪೂರ್ತಿದಾಯಕವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಡಲಿ ಎಂದು ಕುಟುಂಬಸ್ಥರು, ಶಿಕ್ಷಕರು ಹಾಗೂ ಕ್ರೀಡಾಭಿಮಾನಿಗಳು ಹಾರೈಸಿದ್ದಾರೆ.

Leave a Reply

Your email address will not be published. Required fields are marked *