ಕ್ರಿಕೆಟ್ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

-

- Advertisment -spot_img

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು ಯೋಜನೆಯಡಿ ಸ್ಥಳೀಯ ಆಯ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಜೂನ್ 7 ರವಿವಾರ ಬೆಳಿಗ್ಗೆ ಶ್ರೀ ವೆಂಕಟರಮಣ ಭಜನಾ ಮಂದಿರ ಪಿತ್ರೋಡಿ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಮಾನ್ಯ ಪಿತ್ರೋಡಿ,ರಕ್ಷಿತ್ ಶೆಟ್ಟಿ ಪಿತ್ರೋಡಿ,ಗೌರಿ ಮೆಂಡನ್ ಪಿತ್ರೋಡಿ ಮತ್ತು ಅಮೃತ ಗಾಣಿಗ ಜಾರುಕುದ್ರು ಇನ್ನಿತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಸ್ಥೆಯ ಗೌರವಾಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ “ಯಾವುದೇ ಪ್ರಚಾರ ಬಯಸದೇ ವೆಂಕಟರಮಣ ಸಂಸ್ಥೆ ಕಳೆದ ಮೂರುವರೆ ದಶಕದಿಂದ ಸಮಾಜ ಸೇವೆ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು,ಈ ಬಾರಿ ವಿದ್ಯಾರ್ಥಿ ವೇತನ ನೀಡುವುದರ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿರುವುದು ಶ್ಲಾಘನೀಯ” ಎಂದರು.

ಈ ಸಂದರ್ಭ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ ವಿಶ್ವಯೋಗ ದಿನಾಚರಣೆಯ ಪ್ರಯುಕ್ತ “ಯೋಗದಿಂದ ಗೋಸೇವೆ” ಯೋಗರತ್ನ ತನುಶ್ರೀ ಪಿತ್ರೋಡಿ ಇವರಿಂದ ಪ್ರದರ್ಶಿಸಲ್ಪಡುವ 300 ಯೋಗಾಸನ ಪ್ರದರ್ಶನ‌ದ ಪೋಸ್ಟರ್ ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಅಧ್ಯಕ್ಷರಾದ ಸಂದೀಪ್ ಕುಮಾರ್,ಸತೀಶ್ ಕುಂದರ್, ವಿಜಯ್ ಕೋಟ್ಯಾನ್,ಗಂಗಾಧರ್ ಕರ್ಕೇರಾ,ಕೋಟ ರಾಮಕೃಷ್ಣ ಆಚಾರ್,ಪ್ರವೀಣ್ ಪಿತ್ರೋಡಿ, ಯೋಗರತ್ನ ತನುಶ್ರೀ ಪಿತ್ರೋಡಿ ಹಾಗೂ ಸಂಸ್ಥೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು‌.

ಉದಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

8 + 7 =

Latest news

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...
- Advertisement -spot_imgspot_img

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

Must read

- Advertisement -spot_imgspot_img

You might also likeRELATED
Recommended to you