ಕ್ರಿಕೆಟ್ಸುರತ್ಕಲ್ ನಲ್ಲಿ ಮತ್ತೊಮ್ಮೆ ಹಿರಿಯರ ಕ್ರಿಕೆಟ್ ಹಬ್ಬ- ಲೆಜೆಂಡ್ಸ್ ಕ್ರಿಕೆಟ್ ಲೀಗ್...

ಸುರತ್ಕಲ್ ನಲ್ಲಿ ಮತ್ತೊಮ್ಮೆ ಹಿರಿಯರ ಕ್ರಿಕೆಟ್ ಹಬ್ಬ- ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ 3

-

- Advertisment -spot_img
ಮಂಗಳೂರು-ಸುರತ್ಕಲ್ ಸ್ಫೋರ್ಟ್ಸ್& ಕಲ್ಚರಲ್ ಕ್ಲಬ್  (ರಿ ) ಸಂಸ್ಥೆಯು  ಮಾರ್ಚ್ 2 ಮತ್ತು 3ರಂದು  ಸುರತ್ಕಲ್ ನ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ  45 ವರ್ಷಕ್ಕಿಂತ ಮೇಲ್ಪಟ್ಟ ಆಟಗಾರರಿಗಾಗಿ ಮೂರನೆಯ ಆವೃತ್ತಿಯ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಆಯೋಜಿಸಿದ್ದಾರೆ.
ಟೆನಿಸ್ಬಾಲ್ ಕ್ರಿಕೆಟ್ ನ ಗತ ವೈಭವವನ್ನು ಮರು ಸೃಷ್ಟಿಸುವ ವಿಶೇಷ ಪರಿಕಲ್ಪನೆಯ ಈ ಪಂದ್ಯಾಟದಲ್ಲಿ ಬೆಂಗಳೂರು,ಮೈಸೂರು,
ಅರಸೀಕೆರೆ,ಶಿವಮೊಗ್ಗ,ದಕ್ಷಿಣ ಕನ್ನಡ, ಉಡುಪಿ ಹೀಗೆ ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ಆಟಗಾರರ ಒಟ್ಟು12 ಹಿರಿಯ ಪ್ರತಿಷ್ಠಿತ ತಂಡಗಳು ಭಾಗವಹಿಸಲಿವೆ.
ಸುರತ್ಕಲ್ ಸ್ಫೋರ್ಟ್ಸ್& ಕಲ್ಚರಲ್ ಕ್ಲಬ್ (ರಿ ) ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ ಮತ್ತು    ಸಂಸ್ಥೆಯ ಮಹಾಪೋಷಕರಾದ ಎ.ಸಿ.ಪಿ ಅಧಿಕಾರಿ ಎಸ್ ಮಹೇಶ್ ಕುಮಾರ್ ಇವರ ಸಾರಥ್ಯದಲ್ಲಿ ಹಾಗೂ ಸುರತ್ಕಲ್ ಪರಿಸರದ ಹಿರಿಯ ಹಾಗೂ ಕಿರಿಯ ಆಟಗಾರರ ಬೆಂಬಲದೊಂದಿಗೆ ಪಂದ್ಯಾವಳಿ ನಡೆಯಲಿದೆ.
ವಿಜೇತ ಮತ್ತು ರನ್ನರ್ ಅಪ್ ತಂಡಗಳಿಗೆ  ಕ್ರಮವಾಗಿ ರೂ. 1,00,001 ಮತ್ತು 50,005 ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ. ಪಂದ್ಯಾವಳಿಯ ನೇರ ಪ್ರಸಾರ ಬೆದ್ರಾ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಮಾರ್ಚ್ 4 ರಂದು ತೃತೀಯ ವಾರ್ಷಿಕೋತ್ಸವ ಸಮಾರಂಭ
ಸುರತ್ಕಲ್ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ನ ತೃತೀಯ ವಾರ್ಷಿಕೋತ್ಸವ ಮಾರ್ಚ್ 4 ರಂದು ಸಂಜೆ 6 ಗಂಟೆಗೆ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ,ಸನ್ಮಾನ ಸಮಾರಂಭದ ಬಳಿಕ ಕಲಾ ಸಂಗಮ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ಶಿವದೂತೆ ಗುಳಿಗೆ ನಾಟಕದ ಪ್ರದರ್ಶನ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ ಇವರು ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twenty − three =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you