Categories
ಭರವಸೆಯ ಬೆಳಕು

ಸೇವಾರತ್ನ ಡಾ.ಗೋವಿಂದಬಾಬು ಪೂಜಾರಿ ಅವರಿಗೆ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಪ್ರದಾನ

ಬೆಂಗಳೂರು-ಶ್ರೀ ಸಿದ್ಧಾರ್ಥ ಎಜ್ಯುಕೇಷನ್ ಸೊಸೈಟಿ ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್‌ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 111 ನೇ ಜನ್ಮದಿನದ ಸಂಭ್ರಮದ ಅಂಗವಾಗಿ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ,ಡಾ.ಗೋವಿಂದ ಬಾಬುಪೂಜಾರಿ ಇವರ ಸಮಾಜ ಸೇವೆಯನ್ನು ಗುರುತಿಸಿ,
“ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2020” ನೀಡಲಾಯಿತು.
ರಾಜ್ಯ ವಸತಿ ಸಚಿವ ವಿ.ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್,ಶಾಸಕ ರೇಣುಕಾಚಾರ್ಯ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದರು.
ಬಡಕುಟುಂಬದಿಂದ ಬಂದು,ಹಲವಾರು ಅಡೆ ತಡೆಗಳನ್ನು ದಾಟಿ ಬಂದ ಡಾ.ಗೋವಿಂದ ಬಾಬು ಪೂಜಾರಿಯವರು ಸ್ವಂತ ಪರಿಶ್ರಮದಿಂದ ಬದುಕು ಕಟ್ಟಿಕೊಂಡರು.ಶೆಫ್ ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವೀಸಸ್ ಪ್ರೈ.ಲಿ,ಪ್ರಗ್ನ್ಯಾ ಸಾಗರ್,ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ  ಮೊದಲಾದ ಸಂಸ್ಥೆಯ ಮೂಲಕ ಸಹಸ್ರಾರು ಜನರಿಗೆ ಉದ್ಯೋಗವನ್ನು ನೀಡಿದ್ದಾರೆ‌.ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಮೂಲಕ ಸೂರಿಲ್ಲದವರಿಗೆ ಇದುವರೆಗೆ 8  ಮನೆ ನಿರ್ಮಿಸಿಕೊಟ್ಟಿದ್ದಾರೆ‌.ಬಡ ಅಶಕ್ತ ಕುಟುಂಬಗಳಿಗೆ ಆರೋಗ್ಯ ಸಂಬಂಧಿ,ಶೈಕ್ಷಣಿಕ,ಕೊರೋನಾ ಸಂದರ್ಭ ಸಾವಿರಾರು ಫುಡ್-ರೇಷನ್ ಕಿಟ್ ವಿತರಣೆ ಸೇರಿದಂತೆ ಅನೇಕ‌ ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿದ್ದಾರೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

seventeen − eleven =