ಕ್ರಿಕೆಟ್ನವೆಂಬರ್ 24 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು...

ನವೆಂಬರ್ 24 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್-2022

-

- Advertisment -spot_img
ದಾವಣಗೆರೆ-ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ,ದಾವಣಗೆರೆಯ ಶಾಸಕರು ಮಾಜಿ ಸಚಿವರಾದ
ಶಾಮನೂರು ಶಿವಶಂಕರಪ್ಪ ನವರ ಧರ್ಮಪತ್ನಿ ದಿ.ಪಾರ್ವತಮ್ಮನವರ ಸವಿನೆನಪಿನ ಅಂಗವಾಗಿ,ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ,
ಉದ್ಯಮಿ ಶಿವಗಂಗಾ ಶ್ರೀನಿವಾಸ್ ಶಾಮನೂರು ಶಿವರಂಕರಪ್ಪನವರ ಆಪ್ತರು ದಿನೇಶ್.ಕೆ.ಶೆಟ್ಟಿ ಮತ್ತು ಕುರುಡಿ ಗಿರೀಶ್ ಇವರ ಸಹಕಾರದೊಂದಿಗೆ,ಕ್ರೀಡಾ ಪ್ರೋತ್ಸಾಹಕರಾದ ಜಯಪ್ರಕಾಶ್ ಗೌಡ(ಜೆ.ಪಿ) ಇವರ ದಕ್ಷ ಸಾರಥ್ಯದಲ್ಲಿ,ದಾಖಲೆಯ ಸತತ 15 ನೇ ಬಾರಿಗೆ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಎಂದೇ ಖ್ಯಾತಿ ಗಳಿಸಿದ “ಶಾಮನೂರು ಡೈಮಂಡ್,ಶಿವಗಂಗಾ ಕಪ್-2022” ಹೊನಲು ಬೆಳಕಿನ ಈ ರಾಷ್ಟ್ರೀಯ ಮಟ್ಟದ ಪಂದ್ಯಾಟ,
ನವೆಂಬರ್ 24 ರಿಂದ 27 ರ ತನಕ ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮುಂಬಯಿ,ಮಧ್ಯಪ್ರದೇಶ,ಚೆನ್ನೈ,ಕೇರಳ,ಕರ್ನಾಟಕ ಸೇರಿದಂತೆ ಒಟ್ಟು 32 ಬಲಿಷ್ಠ ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಸೆಣಸಾಡಲಿದ್ದು,
ದಾವಣಗೆರೆ ಸೇರಿದಂತೆ ರಾಜ್ಯದಾದ್ಯಂತ ಲಕ್ಷಾಂತರ ಕ್ರೀಡಾಭಿಮಾನಿಗಳು ಪಂದ್ಯಾಟದ ಸವಿಯನ್ನು ಸವಿಯಲಿದ್ದಾರೆ.
M.Sports ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಶಾಮನೂರು ಶಿವಗಂಗಾ ಕಪ್-2022 ಪಂದ್ಯಾವಳಿಯ ಪ್ರಥಮ ಬಹುಮಾನ 4,05,555 ರೂ ನಗದು,ದ್ವಿತೀಯ ಸ್ಥಾನಿ 3,05,555 ರೂ ನಗದು,ತೃತೀಯ ಸ್ಥಾನಿ 1,25,555 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ಪಡೆಯಲಿದ್ದಾರೆ.
ತಂಡಗಳ ನೋಂದಣಿಗೆ ನವೆಂಬರ್ 6 ಕೊನೆಯ ದಿನವಾಗಿದ್ದು,ಹೆಚ್ಚಿನ ಮಾಹಿತಿಗಾಗಿ ಹಾಲಪ್ಪ-7353436040
ಮತ್ತು ಆಕಾಶ್-9008590505
 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 3 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you