ಮಂಗಳೂರಿನಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಣಿಪಾಲದ ಮಾಧವ ಕೃಪಾ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಅತೀಕ್ಷ್ ಶೆಟ್ಟಿ ಕ್ರಮವಾಗಿ 100,200 ಮತ್ತು 400 ಮೀಟರ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅತೀಕ್ಷ್ ಇವರು ಸುದೀಪ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಸುಪುತ್ರ.ಪ್ಯಾರಡೈಸ್ ಬನ್ನಂಜೆ ತಂಡದ ಹಿರಿಯ ಆಟಗಾರ,ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಶ್ರೀಧರ್ ಶೆಟ್ಟಿ ಬನ್ನಂಜೆ ಇವರ ಮೊಮ್ಮಗ.