Home ಕ್ರಿಕೆಟ್ ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಎಫೆಕ್ಟ್, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಂತರಾಷ್ಟ್ರೀಯ ಪಂದ್ಯಗಳು ಸ್ಥಳಾಂತರ

ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಎಫೆಕ್ಟ್, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಂತರಾಷ್ಟ್ರೀಯ ಪಂದ್ಯಗಳು ಸ್ಥಳಾಂತರ

ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಎಫೆಕ್ಟ್, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಂತರಾಷ್ಟ್ರೀಯ ಪಂದ್ಯಗಳು ಸ್ಥಳಾಂತರ

ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಎಫೆಕ್ಟ್, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಂತರಾಷ್ಟ್ರೀಯ ಪಂದ್ಯಗಳು ಸ್ಥಳಾಂತರ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆದ್ದ ಸಂಭ್ರಮದಲ್ಲಿ ಮಿಂದೆದ್ದಿತ್ತು ಅಭಿಮಾನಿ ಗಣ. ಆದರೆ ಆ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ. 18 ವರ್ಷಗಳಿಂದ ಕಾಯುತ್ತಿದ್ದ ಕಪ್ ಸಂಭ್ರಮ ಕೇವಲ 18 ಗಂಟೆಗಳೊಳಗೆ ಮಾಯವಾಗಿತ್ತು. ಕಾರಣ, ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ನಡೆದ ಕಾಲ್ತುಳಿತ. ಭೀಕರ ಕಾಲ್ತುಳಿತದಲ್ಲಿ 11 ಮಂದಿ ಆರ್.ಸಿ.ಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು.

ಆ ದುರ್ಘಟನೆಯ ನೇರ ಪರಿಣಾಮ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ತಟ್ಟಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಎ ಹಾಗೂ ದಕ್ಷಿಣ ಆಫ್ರಿಕಾ ಎ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯನ್ನು ಬೆಂಗಳೂರಿನಿಂದ ರಾಜ್’ಕೋಟ್’ಗೆ ಬಿಸಿಸಿಐ ಸ್ಥಳಾಂತರ ಮಾಡಿದೆ.

ಈ ಹಿಂದಿನ ವೇಳಾಪಟ್ಟಿಯ ಪ್ರಕಾರ ಭಾರತ ಎ ಹಾಗೂ ದಕ್ಷಿಣ ಆಫ್ರಿಕಾ ಎ ತಂಡಗಳ ಮಧ್ಯೆ ನವೆಂಬರ್ 13, 16 ಹಾಗೂ 19ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ಪಂದ್ಯಗಳು ನಡೆಯಬೇಕಿದ್ದವು. ಆದರೆ ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ಘಟನೆಯ ನಂತರ ಈ ಪಂದ್ಯಗಳನ್ನು ರಾಜ್’ಕೋಟ್’ಗೆ ಸ್ಥಳಾಂತರ ಮಾಡಲಾಗಿದೆ.

ಆದರೆ ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ತಂಡಗಳ ಮಧ್ಯೆ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿರುವ ಎರಡು ದ್ವಿದಿನ ಪಂದ್ಯಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಈ ಎರಡು ಪಂದ್ಯಗಳು ನಿಗದಿಯಂತೆ ಬೆಂಗಳೂರಿನಲ್ಲೇ ನಡೆಯಲಿವೆ. ಆದರೆ ಅವಘಡಕ್ಕೆ ಸಾಕ್ಷಿಯಾದ ಚಿನ್ನಸ್ವಾಮಿ ಕ್ರೀಡಾಂಗಣದ ಪಂದ್ಯಗಳ ಆತಿಥ್ಯವನ್ನು ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಬಿಸಿಸಿಐ ಕಸಿದುಕೊಂಡಿದೆ.

LEAVE A REPLY

Please enter your comment!
Please enter your name here

3 × two =

ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಎಫೆಕ್ಟ್, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಂತರಾಷ್ಟ್ರೀಯ ಪಂದ್ಯಗಳು ಸ್ಥಳಾಂತರ

ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಎಫೆಕ್ಟ್, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಂತರಾಷ್ಟ್ರೀಯ ಪಂದ್ಯಗಳು ಸ್ಥಳಾಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆದ್ದ ಸಂಭ್ರಮದಲ್ಲಿ ಮಿಂದೆದ್ದಿತ್ತು ಅಭಿಮಾನಿ ಗಣ. ಆದರೆ ಆ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ. 18 ವರ್ಷಗಳಿಂದ ಕಾಯುತ್ತಿದ್ದ ಕಪ್ ಸಂಭ್ರಮ ಕೇವಲ 18 ಗಂಟೆಗಳೊಳಗೆ ಮಾಯವಾಗಿತ್ತು. ಕಾರಣ, ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ನಡೆದ ಕಾಲ್ತುಳಿತ. ಭೀಕರ ಕಾಲ್ತುಳಿತದಲ್ಲಿ 11 ಮಂದಿ ಆರ್.ಸಿ.ಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಆ ದುರ್ಘಟನೆಯ ನೇರ ಪರಿಣಾಮ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ತಟ್ಟಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಎ ಹಾಗೂ ದಕ್ಷಿಣ ಆಫ್ರಿಕಾ ಎ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯನ್ನು ಬೆಂಗಳೂರಿನಿಂದ ರಾಜ್’ಕೋಟ್’ಗೆ ಬಿಸಿಸಿಐ ಸ್ಥಳಾಂತರ ಮಾಡಿದೆ. ಈ ಹಿಂದಿನ ವೇಳಾಪಟ್ಟಿಯ ಪ್ರಕಾರ ಭಾರತ ಎ ಹಾಗೂ ದಕ್ಷಿಣ ಆಫ್ರಿಕಾ ಎ ತಂಡಗಳ ಮಧ್ಯೆ ನವೆಂಬರ್ 13, 16 ಹಾಗೂ

Send this to a friend