ಸಾಗರ ತಾಲ್ಲೂಕು ಕರ್ಕಿಕೊಪ್ಪ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಮಾರ್ಚ್ 27 ಮತ್ತು 28 ರಂದು,ಸೆಟ್ಟಿಸರ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಕೂಟ “ಫ್ರೆಂಡ್ಸ್ ಟ್ರೋಫಿ-2021” ಆಯೋಜಿಸಲಾಗಿದೆ.
ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 1.50 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಿ 75 ಸಾವಿರ ನಗದು ಬಹುಮಾನ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ.
M.Sports ನೇರ ಪ್ರಸಾರವನ್ನು ಬಿತ್ತರಿಸಿದರೆ,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯನಿರ್ವಹಿಸಲಿದೆ.ವೀಕ್ಷಕ ವಿವರಣೆಗಾಗಿ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಶಾಂತ್ ಅಂಬಲಪಾಡಿ ಹಾಗೂ ರಾಘವೇಂದ್ರ ಮಟಪಾಡಿ ಸಹಕರಿಸಲಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಬ್ರೌಶರ್ ನಲ್ಲಿ ಲಗತ್ತಿಸಿದ ಮೊಬೈಲ್ ನಂಬರ್ ಸಂಪರ್ಕಿಸಬಹುದಾಗಿದೆ.