ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸುಳ್ಯ ಹಾಗೂ ಪಯಸ್ವಿನಿ ಅನುದಾನಿತ ಪ್ರೌಢಶಾಲೆ ಜಾಲ್ಸೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಯೋಗಾಸನ ಸ್ಪರ್ಧೆ 2024-25
14 ವರ್ಷ ವಯೋಮಾನದ ಅಥ್ಲೆಟಿಕ್ಸ್ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ “ಅವನಿ ಎಂ ಎಸ್ ಸುಳ್ಯ” ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಇವರು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿ. ಇವರು ಯೋಗಾಭ್ಯಾಸವನ್ನು ಸಂತೋಷ್ ಮುಂಡಕಜೆ ಸುಳ್ಯ ಇವರಿಂದ ಪಡೆಯುತ್ತಿದ್ದಾರೆ.