15.1 C
London
Wednesday, October 2, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಸನ್ ರೈಸ್ ಕ್ರಿಕೆಟ್ ಅಕಾಡೆಮಿ ವತಿಯಿಂದ ಲೆದರ್ ಬಾಲ್ ಕ್ರಿಕೆಟ್ ತರಬೇತಿ ಶಿಬಿರ ಮತ್ತು ದಿ.ಶ್ರೀಮತಿ...

ಸನ್ ರೈಸ್ ಕ್ರಿಕೆಟ್ ಅಕಾಡೆಮಿ ವತಿಯಿಂದ ಲೆದರ್ ಬಾಲ್ ಕ್ರಿಕೆಟ್ ತರಬೇತಿ ಶಿಬಿರ ಮತ್ತು ದಿ.ಶ್ರೀಮತಿ ಲೂಸಿ ಸಲ್ದಾನ‌ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Date:

Related stories

spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_img
spot_imgspot_img
ಕಾರ್ಕಳ-ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಶ್ರೀಯುತ ಲಾರೆನ್ಸ್ ಸಲ್ದಾನ ಕೌಡೂರು ರವರ  ಕನಸಿನ ಕ್ರೀಡಾಂಗಣ, ಕಾರ್ಕಳ ತಾಲೂಕಿನ ರಂಗನಪಲ್ಕೆ ಗ್ಲಾರಿಡಾ ಎಸ್ಟೇಟ್ ಎಲ್ಯಾಳದ
“ಕೌಡೂರು ಸ್ಟೇಡಿಯಂ” ನಲ್ಲಿ , ಸಲ್ದಾನ್ಹರವರ ಪ್ರಾಯೋಜಕತ್ವ ದ *ಸನ್ ರೈಸ್ ಕ್ರಿಕೆಟ್ ಅಕಾಡೆಮಿ* ವತಿಯಿಂದ, ಲೆದರ್ ಬಾಲ್ ಕ್ರಿಕೆಟ್ ತರಬೇತಿ ಶಿಬಿರ ಶುಬಾರಂಭಗೊಳ್ಳಲಿದೆ.
ಪ್ರಕೃತಿ ಸೌಂದರ್ಯ ಒಳಗೊಂಡ ವಿಶಾಲವಾದ ಮೈದಾನ,
ಎಲ್ಲಾ ರೀತಿಯ ಮೂಲ ಸೌಕರ್ಯ, ಹೊಸದಾಗಿ ಹೊಂದಿಸಲಾದ ಆಸ್ಟ್ರೋ ಟರ್ಫ್ ವಿಕೆಟ್ ಈ ಅಕಾಡೆಮಿಯ ವಿಶೇಷತೆಗಳು. ಕಾರ್ಕಳ ತಾಲೂಕಿನ ಹಾಗೂ ಈ ಭಾಗದ, ಆಸಕ್ತ ಬಾಲಕ ಬಾಲಕಿಯರು ಇದರ ಸದುಪಯೋಗ ಪಡಿಸಿಕೊಳ್ಳುವ ಸದವಕಾಶ ಕಲ್ಪಿಸಲಾಗಿದೆ.
ಅಕಾಡೆಮಿಯ ವತಿಯಿಂದ ,ದಿ.ಶ್ರೀಮತಿ. ಲೂಸಿ ಸಲ್ದಾನ ಸ್ಮರಣಾರ್ಥ ರಾಜ್ಯಮಟ್ಟದ ಅಂಡರ್ 14 ರ ವಯೋಮಿತಿಯ, ಲೆದರ್ ಬಾಲ್ ಟಿ-20 ಕ್ರಿಕೆಟ್ ಪಂದ್ಯಾವಳಿ, ಏಪ್ರಿಲ್ 8 ರಿಂದ 12 ರ ವರೆಗೆ, ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಈ ಕ್ರಿಕೆಟ್ ಪಂದ್ಯಾಟದ ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದ ತಂಡಗಳಿಗೆ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ. ಹಾಗೂ ಪ್ರತಿ ಪಂದ್ಯಕ್ಕೂ ಪಂದ್ಯಶ್ರೇಷ್ಟ, ಬೆಸ್ಟ್ ಬ್ಯಾಟರ್, ಬೆಸ್ಟ್ ಬೌಲರ್ ಹಾಗೂ ಸರಣಿ ಪುರುಷೋತ್ತಮ ಪ್ರಶಸ್ತಿ ರೂಪದಲ್ಲಿ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ. ರಾಜ್ಯದ ಪ್ರತಿಷ್ಠಿತ 12 ತಂಡಗಳು ಈ ಒಂದು ಪಂದ್ಯಾಕೂಟದಲ್ಲಿ ಸೆಣಸಾಡಲಿವೆ.ಪ್ರತಿ ದಿನ ಮೂರು ಪಂದ್ಯಗಳು ನಡೆಯಲಿದ್ದು,1-09-2008 ನಂತರದ ಜನನ ದಿನಾಂಕದ ಆಟಗಾರರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಸನ್ ರೈಸ್ ಕ್ರಿಕೆಟ್ ಅಕಾಡೆಮಿಯ ಪ್ರಧಾನ ಕೋಚ್, ಹಿರಿಯ ಆಟಗಾರರಾದ ಸದಾನಂದ ಶಿರ್ವ -9972581234 ಇವರನ್ನು ಸಂಪರ್ಕಿಸಬಹುದಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eleven + 18 =