ಕುಕ್ಕೆ ಸುಬ್ರಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಉಡುಪಿಯ ಅಳಿಯ ಸೂರ್ಯ!

ಕುಕ್ಕೆ ಸುಬ್ರಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಉಡುಪಿಯ ಅಳಿಯ ಸೂರ್ಯ!

ಕುಕ್ಕೆ ಸುಬ್ರಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಉಡುಪಿಯ ಅಳಿಯ ಸೂರ್ಯ!

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕುಟುಂಬ ಸಮೇತ ಮಂಗಳವಾರ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಮಣ್ಯಕ್ಕೆ ಪತ್ನಿ ದೇವಿಷಾ ಶೆಟ್ಟಿ, ದೇವಿಷಾ ತಂದೆ-ತಾಯಿಯೊಂದಿಗೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್ ವಿಶೇಷ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.

ಕುಕ್ಕೆಗೆ ಬಂದ ಉಡುಪಿಯ ಅಳಿಯನನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ ಭಾರತ ತಂಡ ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾದಲ್ಲಿ ಟಿ20 ಸರಣಿ ಗೆದ್ದಿತ್ತು. ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಸೂರ್ಯ ಸಾರಥ್ಯದ ಟೀಮ್ ಇಂಡಿಯಾ 3-1ರ ಅಂತರದಲ್ಲಿ ಗೆದ್ದುಕೊಂಡಿತ್ತು.

Leave a Reply

Your email address will not be published. Required fields are marked *