Categories
ಕಬಡ್ಡಿ ಗ್ರಾಮೀಣ

ಬೈಂದೂರು : ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ದೇವಳದ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ

ಮರವಂತೆ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆ ಇವರ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

 

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ, ಶಿಕ್ಷಕ ದತ್ತಾತ್ರೇಯ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ, ಹಳೆ ವಿದ್ಯಾರ್ಥಿಗಳಾದ ಅವಿನಾಶ್ ಆಚಾರ್ಯ, ವಿನಾಯಕ ಆಚಾರ್ಯ ಹಾಜರಿದ್ದರು.