ಸ್ಪೋರ್ಟ್ಸ್ತ್ರಿಪಲ್ ಜಂಪ್‌ನಲ್ಲಿ ಚಿನ್ನ ಗೆದ್ದ ತಾಷಾ ಸಿಕ್ವೇರಾ

ತ್ರಿಪಲ್ ಜಂಪ್‌ನಲ್ಲಿ ಚಿನ್ನ ಗೆದ್ದ ತಾಷಾ ಸಿಕ್ವೇರಾ

-

- Advertisment -spot_img

ತ್ರಿಪಲ್ ಜಂಪ್‌ನಲ್ಲಿ ಚಿನ್ನದ ಗೆಲುವು ಸಾಧಿಸಿದ ತಾಷಾ ಸಿಕ್ವೇರಾ

ಬೆಂಗಳೂರು: ಸಿಐಎಸ್‌ಸಿಇ (CISCE) ರಾಷ್ಟ್ರೀಯ ಅಥ್ಲೆಟಿಕ್ಸ್‌ ಕ್ರೀಡಾಸ್ಪರ್ಧೆಯಲ್ಲಿ ಬೆಂಗಳೂರಿನ ತಾಷಾ ಸಿಕ್ವೇರಾ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದಿದ್ದಾರೆ. ಬಾಲಕಿಯರ 17 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿಭಾಗದ ತ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ಪ್ರತಿನಿಧಿಸುವ ತಾಷಾ 10.11 ಮೀಟರ್‌ ದೂರ ಜಿಗಿದು ಪ್ರಥಮ ಸ್ಥಾನ ಪಡೆದು ಕೀರ್ತಿ ಸಾಧಿಸಿದ್ದಾರೆ.

ಈ ಸ್ಪರ್ಧೆ ಶ್ರೀ ಜಯಪ್ರಕಾಶ್‌ ನಾರಾಯಣ ರಾಷ್ಟ್ರೀಯ ಯುವ ಕ್ರೀಡಾ ತರಬೇತಿ ಕೇಂದ್ರ, ವಿದ್ಯಾನಗರ, ಬೆಂಗಳೂರಿನಲ್ಲಿ ನಡೆದಿತ್ತು. ತಾಷಾ ಅವರ ಈ ಸಾಧನೆಯೊಂದಿಗೆ ಅವರು ಎಸ್‌ಜಿಎಫ್‌ಐ (School Games Federation of India) ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

ತಾಷಾ ಸಿಕ್ವೇರಾ ಅವರು ಹೆಬ್ಬಾಳದ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ತಾಷಾ ಅವರ ತಂದೆ ಜಾನ್ ರೋಹನ್ ಸಿಕ್ವೇರಾ ಮತ್ತು ತಾಯಿ ಅರ್ಚನಾ ಕಬೀಲನ್. ತಾಷಾ ಅವರಿಗೆ ಕೃಷ್ಣಮೂರ್ತಿ (ಬೆಂಗಳೂರು ಸ್ಪೋರ್ಟ್ಸ್ ಕ್ಲಬ್) ಅವರು ತರಬೇತಿ ನೀಡುತ್ತಿದ್ದಾರೆ.

ತಾಷಾ ಸಿಕ್ವೇರಾ ಕರ್ನಾಟಕ ತಂಡದ ಪರ ರಾಜ್ಯ ಕ್ರೀಡಾಕೂಟದಲ್ಲಿ ‘ಕಾಗೋ’ ತಂಡದಲ್ಲಿ ಭಾಗವಹಿಸಿ ಅಲ್ಲಿ ಸಹ ಚಿನ್ನದ ಪದಕ ಗೆದ್ದಿದ್ದರು. ರಾಜ್ಯ ಮಟ್ಟದಲ್ಲಿ ತೋರಿದ ಅದ್ಭುತ ಪ್ರದರ್ಶನದಿಂದಲೇ ಅವರು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದರು ಮತ್ತು ಇದೀಗ ರಾಷ್ಟ್ರ ಮಟ್ಟದಲ್ಲಿ ತನ್ನ ಪ್ರಭಾವ ಬೀರಿದ್ದಾರೆ.

ಈ ಸಾಧನೆ ತಾಷಾ ಅವರ ಪರಿಶ್ರಮ ಮತ್ತು ಶಿಸ್ತುಬದ್ಧ ತರಬೇತಿಗೆ ಸಾಕ್ಷಿಯಾಗಿದ್ದು, ಕ್ರೀಡಾಭಿಮಾನಿಗಳಿಂದ ಪ್ರಶಂಸೆಗೆ ಪಾತ್ರವಾಗಿದೆ. ಅವರ ಈ ಸಾಧನೆ ಕರ್ನಾಟಕ ತಂಡಕ್ಕೆ ಹೆಮ್ಮೆ ತಂದಿದ್ದು, ಕ್ರೀಡಾಭಿಮಾನಿಗಳಿಂದ ಅಭಿನಂದನೆಗಳು ಹರಿದು ಬರುತ್ತಿವೆ.

 

LEAVE A REPLY

Please enter your comment!
Please enter your name here

5 + eleven =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you