ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಯಶಸ್ಸಿನ ಹಾದಿಯಲ್ಲಿ T.C.A ಉಡುಪಿ ಜಿಲ್ಲೆ ಪ್ರಯತ್ನ-ದಶಕಗಳ ಬಳಿಕ ಮರುಕಳಿಸಲಿದೆ ಟೆನಿಸ್ಬಾಲ್...

ಯಶಸ್ಸಿನ ಹಾದಿಯಲ್ಲಿ T.C.A ಉಡುಪಿ ಜಿಲ್ಲೆ ಪ್ರಯತ್ನ-ದಶಕಗಳ ಬಳಿಕ ಮರುಕಳಿಸಲಿದೆ ಟೆನಿಸ್ಬಾಲ್ ಕ್ರಿಕೆಟ್ ಗತಕಾಲದ ವೈಭವ!

-

- Advertisment -spot_img
ಉಡುಪಿ ಜಿಲ್ಲೆಯ ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಸಮಾನ‌ ಮನಸ್ಕ ಹಿರಿಯ ಆಟಗಾರರ ಒಗ್ಗೂಡುವಿಕೆಯಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್
ಅಸೋಸಿಯೇಷನ್ ಇವರ ಮೊದಲ ಯೋಜನೆಯಂತೆ ತಾಲೂಕು ಮಟ್ಟದ ಪ್ರತಿಭೆಗಳನ್ನು ಗುರುತಿಸುವ ಸದುದ್ದೇಶ ಡಿಸೆಂಬರ್ ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ.
ಉಡುಪಿ ಜಿಲ್ಲೆಯಾದ್ಯಂತ 7 ತಾಲೂಕುಗಳಲ್ಲಿ  ಆಟಗಾರರ ನೋಂದಣಿ ಪ್ರಕ್ರಿಯೆಗೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು,1000 ಕ್ಕೂ ಹೆಚ್ಚಿನ ಆಟಗಾರರು ತಮ್ಮ‌ ಹೆಸರನ್ನು ನೋಂದಾಯಿಸಿಕೊಂಡಿದ್ದರು.
2 ನೇ ಅತಿ ಹೆಚ್ಚು ಆಟಗಾರರ ನೋದಣಿ(223)ಯಲ್ಲಿ ಭಾಗವಹಿಸಿದ ಕುಂದಾಪುರ ತಾಲೂಕಿನಲ್ಲಿ ಮೊದಲ ಕ್ರಿಕೆಟ್ ಪಂದ್ಯಾಟ,ಡಿಸೆಂಬರ್ 18 ಮತ್ತು 19 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.
90 ರ ದಶಕದಲ್ಲಿ ಇತಿಹಾಸ ಬರೆದ ಕುಂದಾಪುರದ ಪ್ರಸಿದ್ಧ ತಂಡಗಳಾದ ಚಕ್ರವರ್ತಿ,ಟೊರ್ಪೆಡೋಸ್, ಮದೀನಾ,
ಜಾನ್ಸನ್,ಚಾಲೆಂಜ್,ಮಯೂರ,ಗೋಲ್ಡನ್ ಮಿಲ್ಲರ್,ಕೀಳೇಶ್ವರಿ,ಸ್ವಾಮಿ ಗಂಗೊಳ್ಳಿ,ರಾಯಲ್ ಗಂಗೊಳ್ಳಿ,ಅಂಶು ಕೋಟೇಶ್ವರ,ಮಿತೃವೃಂದ,ಲಕ್ಕಿಸ್ಟಾರ್ ಕೋಡಿ,ಮಲ್ಯಾಡಿ ಫ್ರೆಂಡ್ಸ್, ಜ್ವಾಲಿ ಅಂಕದಕಟ್ಟೆ,
ಸಮುದಾಯ ತಲ್ಲೂರು ಈ 16 ತಂಡಗಳು ಮತ್ತೆ ಅಖಾಡಕ್ಕಿಳಿಯಲಿದ್ದು,ಟೆನಿಸ್ಬಾಲ್ ಕ್ರಿಕೆಟ್ ನ ಗತಕಾಲದ ವೈಭವ ಮತ್ತೆ ಮರುಕಳಿಸಲಿದೆ ಎಂದು ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ತಿಳಿಸಿದ್ದಾರೆ.
ಪಂದ್ಯಾವಳಿಯ ನೇರ ಪ್ರಸಾರ M9 ಸ್ಪೋರ್ಟ್ಸ್ ಬಿತ್ತರಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

9 + eleven =

Latest news

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...
- Advertisement -spot_imgspot_img

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

Must read

- Advertisement -spot_imgspot_img

You might also likeRELATED
Recommended to you