
ವೆಸ್ಟ್ ಇಂಡೀಸ್ ವಿರುದ್ಧ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡುವ ಗುರಿಯೊಂದಿಗೆ ಟೀಮ್ ಇಂಡಿಯಾ ಮೈದಾನಕ್ಕಿಳಿಯಲು ಸಜ್ಜು
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಟೀಮ್ ಇಂಡಿಯಾ ಹೊಂದಿದೆ. ಸರಣಿಯ ಎರಡನೇ ಮತ್ತು ಅಂತಿಮ ಪಂದ್ಯ ಶುಕ್ರವಾರದಿಂದ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಶುಭಮನ್ ಗಿಲ್ ತಂಡಕ್ಕೆ ಮೊದಲ ಟೆಸ್ಟ್ ಗೆಲ್ಲಲು ಕೇವಲ ಮೂರು ದಿನಗಳು ಸಾಕಾಯಿತು.
ಮೊದಲ ಟೆಸ್ಟ್‌ನಲ್ಲಿ ಭಾರತವು ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇನ್ನಿಂಗ್ಸ್ ಹಾಗೂ 140 ರನ್‌ಗಳ ಭರ್ಜರಿ ಜಯ ಸಾಧಿಸಿ ಏಕಪಕ್ಷೀಯ ಪ್ರದರ್ಶನ ನೀಡಿತ್ತು. ಎರಡನೇ ಟೆಸ್ಟ್‌ನಲ್ಲಿ ಭಾರತವು ಇದೇ ರೀತಿಯ ಅಧಿಕಾರಯುತ ಪ್ರದರ್ಶನ ನೀಡುವ ಗುರಿಯನ್ನು ಹೊಂದಿದೆ. ಈ ಬಾರಿಯೂ ಶುಭಮನ್ ಗಿಲ್ ನೇತೃತ್ವದ ತಂಡವು ಅದೇ ರೀತಿ ಆಡಲು ಸಜ್ಜಾಗಿದೆ.


ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ, ಸರಣಿಯನ್ನು ವಶಕ್ಕೆ ಪಡೆಯುವ ಕನಸು ಶುಭಮನ್ ಗಿಲ್ ಪಡೆಯದ್ದಾಗಿದೆ. ಇನ್ನು ಆಡಿದ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ವೆಸ್ಟ್ ಇಂಡೀಸ್ ತಂಡ ಪುಟಿದೇಳುವ ಕನಸು ಕಾಣುತ್ತಿದೆ.
ಅಹಮದಾಬಾದ್ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಸಂಘಟಿತ ಆಟದ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಬ್ಯಾಟಿಂಗ್‌ನಲ್ಲಿ ರವೀಂದ್ರ ಜಡೇಜಾ, ಕೆಎಲ್ ರಾಹುಲ್, ಧ್ರುವ್ ಜುರೇಲ್ ಶತಕ ಬಾರಿಸಿದರೆ, ಬೌಲಿಂಗ್‌ನಲ್ಲಿ ಸಿರಾಜ್, ಜಡ್ಡು ಕಮಾಲ್ ಪ್ರದರ್ಶನ ನೀಡಿದರು. ಜೇಟ್ಲಿ ಪಿಚ್‌ನಲ್ಲೂ ಇದೇ ಪ್ರದರ್ಶನ ನೀಡುವ ಕನಸು ಭಾರತ ತಂಡದ್ದಾಗಿದೆ.
ಈ ಮೈದಾನದಲ್ಲೂ ಟೀಮ್ ಇಂಡಿಯಾ ಮತ್ತೊಂದು ಏಕಪಕ್ಷೀಯ ಜಯ ದಾಖಲಿಸುವ ಕನಸು ಹೊಂದಿದೆ. 14 ವರ್ಷದ ಬಳಿಕ ಇದೇ ಅಂಗಳದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಕಾದಾಟ ನಡೆಸಲಿವೆ. ಅರುಣ್ ಜೇಟ್ಲಿ ಮೈದಾನದಲ್ಲಿ ಸ್ಪಿನ್ ಬೌಲರ್‌ಗಳು ಅಬ್ಬರ ನಡೆಸಲಿದ್ದಾರೆ. ಇನ್ನು ಬೌನ್ಸ್ ಸಹ ವೇಗದ ಬೌಲರ್‌ಗಳಿಗೆ ನೆರವು ನೀಡಲಿದೆ. ವೆಸ್ಟ್ ಇಂಡೀಸ್ ಬ್ಯಾಟರ್‌ಗಳಿಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗುವ ಸಾಧ್ಯತೆ ಇದೆ. ಎರಡನೇ ಟೆಸ್ಟ್‌ನಲ್ಲಿ ಯಾರು ಮಿಂಚುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಭಾರತ ಮತ್ತೆ ಗೆಲ್ಲುವ ಸಾಧ್ಯತೆ ಇದೆ.






