ಗೆಲುವಿನ ಹಾದಿಗೆ ಮರಳಿದ ಟೀಂ ಇಂಡಿಯಾ
ಡರ್ಬನ್: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಡರ್ಬನ್‌ನ ಕಿಂಗ್ಸ್‌ಮೀಡ್‌ನಲ್ಲಿ ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅವರ ತಂಡವು ಮೊದಲ ಟಿ20 ಅನ್ನು 61 ರನ್‌ಗಳಿಂದ ಗೆದ್ದಿದೆ. ಇದರೊಂದಿಗೆ ಭಾರತ ತಂಡ ನಾಲ್ಕು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಸಂಜು ಸ್ಯಾಮ್ಸನ್ (50 ಎಸೆತಗಳಲ್ಲಿ 107) ಶತಕ ಸಿಡಿಸಿ ಮೊದಲು ಬ್ಯಾಟ್ ಮಾಡಿದ ಭಾರತ ಎಂಟು ವಿಕೆಟ್ ನಷ್ಟಕ್ಕೆ 202 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಪ್ರತ್ಯುತ್ತರವಾಗಿ, ಪ್ರೋಟೀಸ್ 18 ಓವರ್‌ಗಳಲ್ಲಿ 141 ಸ್ಕೋರ್‌ಗೆ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾ ಯಾವುದೇ ಹಂತದಲ್ಲಿ ಭಾರತಕ್ಕೆ ಗಮನಾರ್ಹ ಸವಾಲು ಒಡ್ಡಲಿಲ್ಲ ಮತ್ತು 17.5 ಓವರ್‌ಗಳಲ್ಲಿ 141 ರನ್‌ಗಳಿಗೆ ಆಲೌಟ್ ಆಯಿತು.
ಸಂಜು ಅವರ ಅಬ್ಬರದ ಶತಕವೇ ಪಂದ್ಯದ ದಿಕ್ಕನ್ನೇ ಬದಲಿಸಿತು.50 ಎಸೆತಗಳಲ್ಲಿ 107 ರನ್ ಗಳಿಸಿ ಅದ್ಭುತ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಈ ಗೆಲುವಿನಿಂದ ಭಾರತ 4 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ಆತಿಥೇಯರ ವಿರುದ್ಧ 1-0 ಮುನ್ನಡೆ ಸಾಧಿಸಿದೆ.