
ಕ್ರೀಡಾಕ್ಷೇತ್ರಕ್ಕೆ ಟೊರ್ಪೆಡೋಸ್ ಸಂಸ್ಥೆಯ ಕೊಡುಗೆ ಅಪಾರ-ಯಶ್ಪಾಲ್ ಸುವರ್ಣ
ಉಡುಪಿ-ಇಲ್ಲಿನ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್-2025 ವಿದ್ಯುಕ್ತವಾಗಿ ಉದ್ಘಾಟನೆ ನೆರವೇರಿತು.


ದೀಪ ಬೆಳಗಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಬಹಳಷ್ಟು ವರ್ಷಗಳಿಂದ ಹಲವಾರು ಕ್ರೀಡಾಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಸೃಷ್ಟಿಸಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನಾಗಿ ರೂಪಿಸಿದೆ”ಎಂದರು.


ಈ ಸಂದರ್ಭ ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಪ್ರಸಾದರಾಜ್ ಕಾಂಚನ್,ಯುವಜನ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ,ಉದ್ಯಮಿ ಅಬ್ದುಲ್ ರೆಹಮಾನ್,ವಕೀಲರಾದ ಗಣೇಶ್ ಕುಮಾರ್ ಮಟ್ಟು,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಗೌತಮ್ ಶೆಟ್ಟಿ,ಕ್ರೀಡಾಕೂಟ ಪ್ರಮುಖ ಆಯೋಜಕರಲ್ಲೋರ್ವರಾದ ಶಾಲಿನಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಹಿರಿಯ ಕ್ರೀಡಾಪಟು ಎಮ್.ಎಸ್.ಪುಟ್ಟರಾಜು ಮತ್ತು ಅಂತರಾಷ್ಟ್ರೀಯ ಕ್ರೀಡಾಪಟು ಶಾಲಿನಿ ಶೆಟ್ಟಿ ಇವರನ್ನು ಗೌರವಿಸಲಾಯಿತು.


ಸುರೇಶ್ ಭಟ್ ಮುಲ್ಕಿ ಉದ್ಘಾಟನಾ ಕಾರ್ಯಕ್ರಮ ನಿರೂಪಿಸಿದರು. ಸ್ಪೋರ್ಟ್ಸ್ ಕನ್ನಡ ನೇರ ಪ್ರಸಾರ ಪ್ರಸಾರ ಮಾಡಿತು.






