ಬೈಂದೂರು-“ಕ್ರೀಡೆ ಯುವ ಜನತೆಯನ್ನು ಒಗ್ಗೂಡಿಸಿ ಉತ್ಸಾಹ ಮೂಡಿಸಿ ಜೀವಕಳೆಯನ್ನು ತುಂಬುತ್ತದೆ.ಕ್ರೀಡಾಪಟುಗಳು ಸೋತಾಗ ಕುಗ್ಗದೆ,ಗೆದ್ದಾಗ ಹಿಗ್ಗದೆ ಸಮಭಾವದಿಂದ ಬದುಕನ್ನು ರೂಪಿಸಿಕೊಂಡರೆ ಯಶಸ್ಸು ಖಂಡಿತ” ಎಂದು ಬೈಂದೂರು ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘ ಇವರು ಆಯೋಜಿಸಿದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಟೊರ್ಪೆಡೋಸ್ ಹೇಳಿದರು.
ಎರಡು ದಿನಗಳ ಕಾಲ ಬೈಂದೂರಿನ ಗಾಂಧಿ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಫೈನಲ್ ನಲ್ಲಿ ಗೌರೀಶ್ ಹಾಗೂ ಅರುಣ್ ನೇತೃತ್ವದ ಅನ್ವಿ ಪ್ರಯಾಣ್ 11 ತಂಡ ಶಂಕರನಾರಾಯಣ ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ ಬೈಂದೂರು,ಬೈಂದೂರು ಬಿ.ಜೆ.ಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸಮಾಜಸೇವಕರು ಉದ್ಯಮಿಗಳಾದ ಡಾ.ಗೋವಿಂದ ಬಾಬು ಪೂಜಾರಿ,ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಬೈಂದೂರು,ಜಿಲ್ಲಾ ಪಂಚಾಯತ್ ಸದಸ್ಯರಾದ ರಾಜು ಪೂಜಾರಿ,ಅಂತರಾಷ್ಟ್ರೀಯ ಕ್ರಿಕೆಟ್ ಪಟು ಪ್ರಥ್ವೀರಾಜ್ ಶೆಟ್ಟಿ ಹುಂಚನಿ,ದಿನೇಶ್ ಗಾಣಿಗ ವಿಕ್ರಮ್ ಬೈಂದೂರು,ಸೇನೇಶ್ವರ ಕಲಾ ಮತ್ತು ಕ್ರೀಡಾರಂಗದ ಅಧ್ಯಕ್ಷ ರಾಮಕೃಷ್ಣ ದೇವಾಡಿಗ ಮತ್ತು ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.