ಕ್ರೀಡಾ ಮನೋಭಾವದಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ-ಟೊರ್ಪೆಡೋಸ್ ಗೌತಮ್ ಶೆಟ್ಟಿ

ಕ್ರೀಡಾ ಮನೋಭಾವದಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ-ಟೊರ್ಪೆಡೋಸ್ ಗೌತಮ್ ಶೆಟ್ಟಿ
ಬ್ರಹ್ಮಾವರ-ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್(ರಿ)ಒಳಾಂಗಣದಲ್ಲಿ ಆಗಸ್ಟ್ 29 ರವಿವಾರದಂದು ನಡೆದ ರಾಷ್ಟ್ರೀಯ ಕ್ರೀಡಾದಿನಾಚರಣೆಯಲ್ಲಿ ಗೌರವ  ಸನ್ಮಾನ‌ ಸ್ವೀಕರಿಸಿ ಮಾತನಾಡಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು,ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಟೊರ್ಪೆಡೋಸ್ ಗೌತಮ್ ಶೆಟ್ಟಿಯವರು “ಕ್ರೀಡೆಯಿಂದ ಜೀವನ ಕೌಶಲ್ಯ,ಆತ್ಮವಿಶ್ವಾಸ,ಮಾನಸಿಕ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ.ಒಬ್ಬ ವ್ಯಕ್ತಿಯ ವ್ಯಕ್ತಿತ್ವ,ಆತನ ಯಶಸ್ಸು ಕ್ರೀಡೆಯಿಂದಲೇ ರೂಪುಗೊಳ್ಳುತ್ತದೆ” ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ,ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷ ರೊಟೇರಿಯನ್ ಹರೀಶ್ ಕುಂದರ್,ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಎಮ್.ಚಂದ್ರಶೇಖರ್ ಹೆಗ್ಡೆ ಮತ್ತು ಕಾರ್ಯದರ್ಶಿ ಗ್ರೆಗರಿ ಡಿಸಿಲ್ವಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *