ಕ್ರಿಕೆಟ್ಉಡುಪಿ ಜಿಲ್ಲಾ ಅಂಡರ್–19 ಪ್ರತಿಭಾ ಶೋಧ ಕ್ರಿಕೆಟ್ ಪಂದ್ಯಾವಳಿ: ಕ್ರಿಕೆಟ್ ಇತಿಹಾಸದಲ್ಲಿ...

ಉಡುಪಿ ಜಿಲ್ಲಾ ಅಂಡರ್–19 ಪ್ರತಿಭಾ ಶೋಧ ಕ್ರಿಕೆಟ್ ಪಂದ್ಯಾವಳಿ: ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ

-

- Advertisment -spot_img

ಉಡುಪಿ ಜಿಲ್ಲಾ ಅಂಡರ್–19 ಪ್ರತಿಭಾ ಶೋಧ ಕ್ರಿಕೆಟ್ ಪಂದ್ಯಾವಳಿ: ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ

ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆ (UDCA) ವತಿಯಿಂದ ಉಡುಪಿ ಜಿಲ್ಲೆಯ ಅಂಡರ್–19 ವಯೋಮಾನದ ಬಾಲಕರಿಗಾಗಿ ವಿಶೇಷ ಪ್ರತಿಭಾ ಶೋಧ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಇದು ಉಡುಪಿ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಮಹತ್ವದ ಹಾಗೂ ವಿಶಿಷ್ಟ ಕಾರ್ಯಕ್ರಮವಾಗಿದೆ.

ಈ ಪಂದ್ಯಾವಳಿ ಆಯ್ಕೆ ಪಂದ್ಯಗಳ ಮಾದರಿಯಲ್ಲಿ 90 ಓವರ್‌ಗಳ ಎರಡು ಇನಿಂಗ್ಸ್‌ಗಳ ಪಂದ್ಯವಾಗಿ ಆಯೋಜಿಸಿರುವುದು ಇದರ ಪ್ರಮುಖ ವಿಶೇಷತೆಯಾಗಿದೆ. ಇದರಿಂದ ಯುವ ಕ್ರಿಕೆಟ್ ಆಟಗಾರರಿಗೆ ಉನ್ನತ ಮಟ್ಟದ ಪಂದ್ಯ ಅನುಭವವನ್ನು ನೀಡುವ ಜೊತೆಗೆ, ದೀರ್ಘ ಅವಧಿಯ ಆಟದ ಮನೋಭಾವ, ತಾಂತ್ರಿಕತೆ ಮತ್ತು ಶಿಸ್ತು ಬೆಳೆಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ.

ಈ ಮಹತ್ವದ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಕಾರ್ಯಕಾರಿ ಸಮಿತಿ, ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಸಂಪೂರ್ಣ ಬೆಂಬಲ ದೊರೆತಿದ್ದು, ಪಂದ್ಯಗಳು ನಿಟ್ಟೆ ಬಿ.ಸಿ. ಆಳ್ವ ಕ್ರಿಕೆಟ್ ಮೈದಾನದಲ್ಲಿ ಯಶಸ್ವಿಯಾಗಿ ನಡೆಯುತ್ತಿವೆ.

ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸಾದ್ ಅವರು ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಯುವ ಆಟಗಾರರು ಶಾರೀರಿಕ ಫಿಟ್ನೆಸ್‌ಗೆ ಹೆಚ್ಚಿನ ಮಹತ್ವ ನೀಡಬೇಕು, ಕ್ರೀಸ್‌ನಲ್ಲಿ ತಮ್ಮ ವಿಕೆಟ್‌ನ ಮೌಲ್ಯವನ್ನು ಅರಿತು ಆಟವಾಡಬೇಕು ಹಾಗೂ ಭವಿಷ್ಯದಲ್ಲಿ ಜಿಲ್ಲೆಯಿಂದಲೇ ಬಲಿಷ್ಠ ಟೆಸ್ಟ್ ಕ್ರಿಕೆಟ್ ತಂಡ ನಿರ್ಮಾಣವಾಗುವ ಅಗತ್ಯತೆಯ ಬಗ್ಗೆ ಪ್ರೇರಣಾದಾಯಕವಾಗಿ ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಡಾ. ರೆನ್ ಟ್ರೆವರ್ ಡಯಾಸ್ ಅವರು ಸಭೆಯನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೋಚ್ ಶ್ರೀ ಸದಾನಂದ ಶಿರ್ವ, ನಿಟ್ಟೆ ವಿಶ್ವವಿದ್ಯಾಲಯದ ಆಡಳಿತ ವರ್ಗದ ಸದಸ್ಯರು ಉಪಸ್ಥಿತರಿದ್ದರು. ನಿಟ್ಟೆ ವಿಶ್ವವಿದ್ಯಾಲಯದ ಶಾರೀರಿಕ ಶಿಕ್ಷಣ ನಿರ್ದೇಶಕರಾದ ಡಾ.ಶಾಮ್ ಸುಂದರ್  ಅವರು ಸಮಾರಂಭದಲ್ಲಿ ಭಾಗವಹಿಸಿ, ಈ ಮಹತ್ವದ ಕ್ರಿಕೆಟ್ ಉಪಕ್ರಮಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲೆಯ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸಿ, ಭವಿಷ್ಯದ ಉನ್ನತ ಮಟ್ಟದ ಆಟಗಾರರನ್ನು ರೂಪಿಸುವ ದಿಶೆಯಲ್ಲಿ ಈ ಪಂದ್ಯಾವಳಿ ಮಹತ್ವದ ಹೆಜ್ಜೆಯಾಗಿದ್ದು, ಕ್ರಿಕೆಟ್ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

 

LEAVE A REPLY

Please enter your comment!
Please enter your name here

3 × two =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you