ಕ್ರಿಕೆಟ್ಬೈಂದೂರಿನಲ್ಲಿ ಅಂಡರ್-19 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ ‘ವಿಕ್ರಂ ಟ್ರೋಫಿ 2025’...

ಬೈಂದೂರಿನಲ್ಲಿ ಅಂಡರ್-19 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ ‘ವಿಕ್ರಂ ಟ್ರೋಫಿ 2025’ ಅದ್ದೂರಿಯಾಗಿ ಆಯೋಜನೆ

-

- Advertisment -spot_img

ಬೈಂದೂರಿನಲ್ಲಿ ಅಂಡರ್-19 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ ‘ವಿಕ್ರಂ ಟ್ರೋಫಿ 2025’ ಅದ್ದೂರಿಯಾಗಿ ಆಯೋಜನೆ

ಬೈಂದೂರು, ಎಪ್ರಿಲ್ 15: ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ಸಂಸ್ಥೆಯ ಆಶ್ರಯದಲ್ಲಿ ಮತ್ತು ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಸಹಭಾಗಿತ್ವದೊಂದಿಗೆ ‘ವಿಕ್ರಂ ಟ್ರೋಫಿ 2025’ ಅಡಿಯಲ್ಲಿ ಅಂಡರ್-19 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಎಪ್ರಿಲ್ 21ರಿಂದ 27ರವರೆಗೆ ಬೈಂದೂರಿನ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ.

1975ರಲ್ಲಿ ಸ್ಥಾಪನೆಯಾದ ವಿಕ್ರಂ ಕ್ರಿಕೆಟ್ ಕ್ಲಬ್ ಲೆದರ್ ಬಾಲ್ ಕ್ರಿಕೆಟ್ ಮೂಲಕ ತನ್ನ ಕ್ರಿಕೆಟ್ ಪಯಣ ಆರಂಭಿಸಿ, ನಂತರದ ದಿನಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳ ಮೂಲಕ ಹೆಸರುವಾಸಿಯಾಯಿತು. ಜಿಲ್ಲೆಯಲ್ಲಿ ನಗದು ಬಹುಮಾನ ಇರುವ ಕ್ರಿಕೆಟ್ ಪಂದ್ಯಾವಳಿಯನ್ನು ಪ್ರಥಮ ಬಾರಿಗೆ ಆಯೋಜಿಸುವ ಕೀರ್ತಿಯನ್ನೂ ಈ ಸಂಸ್ಥೆ ಪಡೆದುಕೊಂಡಿದೆ. ಹಲವು ತಾಲೂಕು, ಜಿಲ್ಲಾ, ಅಂತರ್ಜಿಲ್ಲಾ ಹಾಗೂ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಭಾವ ಬೀರುತ್ತಲೇ ಬಂದಿದೆ.

ಇದುವರೆಗೆ ಹಲವು ಬಾರಿ 60 ಗಜಗಳ ಕ್ರಿಕೆಟ್ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಈ ಸಂಸ್ಥೆ, ಕೇವಲ ಕ್ರೀಡಾಕ್ಷೇತ್ರದಲ್ಲಷ್ಟೇ ಅಲ್ಲದೆ, ಸಮಾಜಸೇವಾ ಕಾರ್ಯಗಳಲ್ಲಿಯೂ ತನ್ನನ್ನು ಗುರುತಿಸಿಕೊಂಡಿದೆ.

ಇದೀಗ, ಲೆದರ್ ಬಾಲ್ ಕ್ರಿಕೆಟ್ ತರಬೇತಿಯನ್ನು ಬೇಸಿಗೆ ಶಿಬಿರ ಹಾಗೂ ವಾರ್ಷಿಕ ಶಿಬಿರಗಳ ಮೂಲಕ ಮುಂದುವರೆಸುತ್ತಿರುವ ವಿಕ್ರಂ ಕ್ರಿಕೆಟ್ ಕ್ಲಬ್, ಬೈಂದೂರಿನಲ್ಲಿ ಮೊತ್ತಮೊದಲ ಬಾರಿಗೆ ಅಂಡರ್-19 ವಯೋಮಿತಿಯ ಕ್ರಿಕೆಟ್ ಟೂರ್ನಿ ಆಯೋಜಿಸುವ ಮೂಲಕ ಯುವ ಆಟಗಾರರಿಗೆ ವೇದಿಕೆ ಒದಗಿಸುತ್ತಿದೆ. ಈ ಪಂದ್ಯಾಟದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಯ್ಕೆಗೊಂಡ ಯುವ ಆಟಗಾರರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕ್ಲಬ್ ಅಧ್ಯಕ್ಷ ದಿನೇಶ್ ಗಾಣಿಗ, ಗೌರವಾಧ್ಯಕ್ಷ ಗಿರೀಶ್ ಬೈಂದೂರು ನಾಗರಾಜ್ ಶೆಟ್ಟಿ, ಉಪಾಧ್ಯಕ್ಷ ಕೆ. ನಾರಾಯಣ, ಗೌರವ ಸಲಹೆಗಾರ ಜಯಾನಂದ ಹೋಬಳಿದಾರ್, ಕಾರ್ಯದರ್ಶಿ ರಾಜೇಶ್ ಆಚಾರ್, ಖಜಾಂಚಿ ಸುನಿಲ್ ಬೈಂದೂರು ಮತ್ತು ಇತರ ಪದಾಧಿಕಾರಿಗಳು ಹಾಗೂ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

‘ವಿಕ್ರಂ ಟ್ರೋಫಿ 2025’ ಟೂರ್ನಿಯು ಯುವ ಪ್ರತಿಭೆಗಳಿಗೆ ಹೆಜ್ಜೆ ಇಡಲು ಉತ್ತಮ ವೇದಿಕೆಯಾಗಲಿದೆ ಎಂಬುದು ಎಲ್ಲರ ನಿರೀಕ್ಷೆಯಾಗಿದೆ.

LEAVE A REPLY

Please enter your comment!
Please enter your name here

five × five =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you