ಕುಂದಾಪುರ ಅ.8 : ಡಾ ಗೋವಿಂದ ಬಾಬು ಪೂಜಾರಿ, ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ.), ಉಪ್ಪುಂದ ಕಾಳವರದ ನರಿ ಕೋಡ್ಲು ಮನೆ ಸತೀಶ್ ಪೂಜಾರಿಯವರು ನೂತನ ಮನೆ ನಿರ್ಮಾಣ ಮಾಡುವ ಕನಸು ಕಂಡಿದ್ದರು, ಆದರೆ ವಿಧಿ ಆಟವೇ ಬೇರೆಯಾಗಿತ್ತು
ಮನೆ ಪೂರ್ಣವಾಗುವ ಮೊದಲೇ ಅಕಾಲಿಕ ಮರಣಕ್ಕೆ ತುತ್ತಾದರೂ, ಇದರಿಂದ ಮನೆಯವರು ಮನೆ ನಿರ್ಮಾಣ ಮಾಡಲು ಸಾಧ್ಯವಾಗದೆ ತೀವ್ರ ಕಷ್ಟದಲ್ಲಿ ಇರುವುದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ.), ಇವರ ಗಮನಕ್ಕೆ ಬಂದು ಮನೆಯನ್ನು ಪೂರ್ಣಗೊಳಿಸಿ ಕೊಡುವ ಭರವಸೆಯನ್ನು ನೀಡಿದರು.
ಇದೀಗ ಸುಸಜ್ಜಿತ ಮನೆ ನಿರ್ಮಾಣಗೊಂಡಿದ್ದು ಈ ಮನೆ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿ ಕೊಡುತ್ತಿರುವ 5ನೇ ಮನೆ ಇದಾಗಿರುತ್ತದೆ. “ವರಲಕ್ಷ್ಮಿ ನಿಲಯ” ಇದರ ಗ್ರಹಪ್ರವೇಶ ಮತ್ತು ಫಲಾನುಭವಿಗಳಿಗೆ ಮನೆಯ ಕೀ ಹಸ್ತಾಂತರ ಕಾರ್ಯಕ್ರಮಕ್ಕೆ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರು ಭಾಗವಹಿಸಿ ಡಾ.ಗೋವಿಂದ ಬಾಬು ಪೂಜಾರಿಯವರಿಗೆ ದೇವರು ಇನ್ನಷ್ಟು ಸಮಾಜಮುಖಿ ಕೆಲಸ ಮಾಡುವ ಶಕ್ತಿ ನೀಡಲಿ ಎಂದು ಹಾರೈಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಕಾಳವರ ಗ್ರಾ. ಪಂ. ಅಧ್ಯಕ್ಷೆ ಆಶಾಲತಾ ಶೆಟ್ಟಿ, ಅಶೋಕ್ ಪೂಜಾರಿ ಕುಂದಾಪುರ ಬಿಲ್ಲವ ಸಂಘ ಅಧ್ಯಕ್ಷರು ಹಾಗೂ ಬಿಲ್ಲವ ಹಿರಿಯ ಮುಖಂಡರು, ಸ್ಥಳೀಯರು ಉಪಸ್ಥಿತರಿದ್ದರು.