ಕ್ರಿಕೆಟ್ವೆಂಕಟರಮಣ ಟ್ರೋಫಿ-2020 ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ

ವೆಂಕಟರಮಣ ಟ್ರೋಫಿ-2020 ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ

-

- Advertisment -spot_img

ಕ್ರೀಡೆಯ ಜೊತೆಗೆ,ರಕ್ತದಾನ ಶಿಬಿರ, ಇತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ವೆಂಕಟರಮಣ ಸಂಸ್ಥೆ,ಸುತ್ತಮುತ್ತಲಿನ ಪರಿಸರದ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ವಾತಾವರಣ ಕಲ್ಪಿಸಿ ರಾಜ್ಯದ ಮಾದರಿ ತಂಡವಾಗಿ ರೂಪುಗೊಂಡಿದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಜಯ್ ಕುಮಾರ್ ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್(ರಿ) ವತಿಯಿಂದ ಆಯೋಜಿಸಲಾದ ಸ್ವರ್ಣ ಖಚಿತ ” ವೆಂಕಟರಮಣ ಟ್ರೋಫಿ-2020″ ನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದರು.

ಉದ್ಯಾವರ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ  ರಿಯಾಜ್ ಪಳ್ಳಿಯವರು ಮಾತನಾಡಿ ವೆಂಕಟರಮಣ ಸಂಸ್ಥೆಯ ನಿರಂತರ ಹೋರಾಟ,ಸಾಮಾಜಿಕ ಸೇವೆಗಳಿಂದ ಉದ್ಯಾವರ ಗ್ರಾಮ ಪಂಚಾಯತ್ ಅಂಗಣದಲ್ಲಿ ಕ್ರಿಕೆಟ್ ಗೆ ಸೂಕ್ತ ಜಾಗವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದರು.ಈ ಸಂದರ್ಭ ಉದ್ಯಾವರ ಗ್ರಾಮ ಪಂಚಾಯತ್ ನ ಸದಸ್ಯರು  ಜಿತೇಂದ್ರ ಶೆಟ್ಟಿ ಉದ್ಯಾವರ ಹಾಗೂ ಸ್ಪೋರ್ಟ್ಸ್‌ ಕನ್ನಡ ಸಂಚಾಲಕ ಕೋಟ ರಾಮಕೃಷ್ಣ ಆಚಾರ್ಯ ಸಂಸ್ಥೆಯ ಕಾರ್ಯ ವೈಖರಿಯನ್ನು ಪ್ರಶಂಸಿಸಿ ಪಂದ್ಯಾವಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ವೆಂಕಟರಮಣ ಸಂಸ್ಥೆಯ ಅಧ್ಯಕ್ಷ ಶ್ರೀ ಮಲ್ಲೇಶ್ ಬಂಗೇರ ಪಿತ್ರೋಡಿ, ಮಾಜಿ ಅಧ್ಯಕ್ಷ ಸಂತೋಷ್ ಕುಂದರ್ ಹಾಗೂ ಸತೀಶ್ ಕುಂದರ್, ಉಪಾಧ್ಯಕ್ಷ ವಿಜಯ್ ಕೋಟ್ಯಾನ್ ಪಿತ್ರೋಡಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ,
ತಂಡದ ನಾಯಕ, ಕಾರ್ಯದರ್ಶಿ ಪ್ರವೀಣ್ ಪಿತ್ರೋಡಿ ಹಾಗೂ ಇನ್ನಿತರ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚೆಗಷ್ಟೇ ಕೃಷ್ಣೈಕ್ಯರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಹಾಗೂ ಕಳೆದ ವರ್ಷ ವಿಧಿವಶರಾದ ಸಂಸ್ಥೆಯ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಬಾಲಕೃಷ್ಣ ಸಾಲ್ಯಾನ್,ನಿತಿನ್ ಹಾಗೂ ನಿಶಾಂತ್ ಸ್ಮರಣಾರ್ಥ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಅಂಗಣದಲ್ಲಿ ವಿಜಯ್ ಕುಮಾರ್ ಉದ್ಯಾವರ ಹಾಗೂ ರಿಯಾಜ್ ಪಳ್ಳಿಯವರು ಬ್ಯಾಟಿಂಗ್ ನಡೆಸಿ ಪಂದ್ಯಾಕೂಟಕ್ಕೆ ಹಸಿರು ನಿಶಾನೆ ಸೂಚಿಸಿದರು. ಶಿಸ್ತುಬದ್ಧ ಸಂಸ್ಥೆಯಾದ ವೆಂಕಟರಮಣ ಪಿತ್ರೋಡಿ, ಡೋಪಿಂಗ್ ಟೆಸ್ಟ್ ಅಳವಡಿಸಿದ್ದು,ಮಾದಕ ದ್ರವ್ಯ ಹಾಗೂ ಮಧ್ಯ ಮುಕ್ತ ಪಂದ್ಯಾವಳಿ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಇಂದು ಗ್ರಾಮೀಣ ಮಟ್ಟದ ತಂಡಗಳಿಗೆ ಅವಕಾಶ ನೀಡಲಾಗಿದ್ದು, ಪ್ರಥಮ ದಿನದ ಅಂತ್ಯದಲ್ಲಿ ಪ್ರಬಲ ಪೈಪೋಟಿಯ ನಡುವೆ ಪ್ರಕೃತಿ ವಿಘ್ನೇಶ್ವರ ಫೈಟರ್ಸ್ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿತ್ತು. ಶನಿವಾರದಂದು ಜಿಲ್ಲಾ ಮಟ್ಟ ಹಾಗೂ ರವಿವಾರದಂದು ರಾಜ್ಯ ಮಟ್ಟದ ಪ್ರತಿಷ್ಟಿತ ತಂಡಗಳು ಸೆಣಸಾಟ ನಡೆಸಲಿದೆ.

ವೀಕ್ಷಕ ವಿವರಣೆ ವಿಭಾಗದಲ್ಲಿ ಹಿರಿಯ ವೀಕ್ಷಕ ವಿವರಣೆಕಾರ ವಿನಯ್ ಉದ್ಯಾವರ ಜೊತೆಗೆ ಯುವ ವೀಕ್ಷಕ ವಿವರಣೆಕಾರರಾದ  ರಾಜಶೇಖರ್.ಪಿ.ಶಮರಾವೋ ಹಾಗೂ ಪ್ರತುಲ್ ಸಹಕರಿಸಿದರೆ,ಶನಿವಾರ ಹಾಗೂ ರವಿವಾರ ಆಂಗ್ಲ ಭಾಷೆಯ ಹೆಸರಾಂತ ವೀಕ್ಷಕ ವಿವರಣೆಕಾರ ಅರವಿಂದ್ ಮಣಿಪಾಲ್ ಪಂದ್ಯಾವಳಿಯ ಮೆರುಗನ್ನು ಹೆಚ್ಚಿಸಲಿದ್ದಾರೆ,ಹಾಗೂ ದ.ಕ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕ್ರೀಡಾ ಕಾರ್ಯದರ್ಶಿ ಪ್ರವೀಣ್ ಕೊರೆಯ ಸಾರಥ್ಯದಲ್ಲಿ,ವೆಂಕಟರಮಣದ ಸಂಸ್ಥೆಯ ಸದಸ್ಯರ ಸಹಕಾರದೊಂದಿಗೆ ಪ್ರಾಯೋಗಿಕವಾಗಿ ನೇರ ಪ್ರಸಾರವನ್ನು ಬಿತ್ತರಿಸುತ್ತಿದ್ದಾರೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 2 =

Latest news

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...
- Advertisement -spot_imgspot_img

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

Must read

- Advertisement -spot_imgspot_img

You might also likeRELATED
Recommended to you