11.7 C
London
Sunday, May 19, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ-ವೆಂಕಟರಮಣ ಟ್ರೋಫಿ-2022-ಅಂತರ್ ಗ್ರಾಮೀಣ ತಂಡಗಳ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ

ಉಡುಪಿ-ವೆಂಕಟರಮಣ ಟ್ರೋಫಿ-2022-ಅಂತರ್ ಗ್ರಾಮೀಣ ತಂಡಗಳ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ ಆಶ್ರಯದಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲೇ ವಿನೂತನ ಪ್ರಯತ್ನದ ರೂಪದಲ್ಲಿ ಉಡುಪಿ ಜಿಲ್ಲಾ ಅಂತರ್ ಗ್ರಾಮೀಣ ತಂಡಗಳ ಕ್ರಿಕೆಟ್ ಪಂದ್ಯಾಕೂಟ “ವೆಂಕಟರಮಣ ಟ್ರೋಫಿ-2022” ಆಯೋಜಿಸಲಾಗಿದೆ.
ಫೆಬ್ರವರಿ 12 ಮತ್ತು 13 ರಂದು ಉದ್ಯಾವರ ಗ್ರಾಮ ಪಂಚಾಯತ್ ಮೈದಾನ ಹಾಗೂ ಕಟಪಾಡಿ ಪಳ್ಳಿಗುಡ್ಡೆ ಮೈದಾನದಲ್ಲಿ ಆಯೋಜಿಸಲಾಗಿರುವ ಈ ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ ಆಕರ್ಷಕ ಬೆಳ್ಳಿಯ ಟ್ರೋಫಿಯೊಂದಿಗೆ 70 ಸಹಸ್ರ ನಗದು,ದ್ವಿತೀಯ ಸ್ಥಾನಿ 40000  ನಗದು ಬಹುಮಾನಗಳನ್ನು ನೀಡಲಾಗುತ್ತಿದೆ.
*ವಿಶೇಷ ಆಕರ್ಷಣೆ ಎಂಬಂತೆ ರಾಜ್ಯ ಲೆದರ್ ಬಾಲ್ ಮಹಿಳಾ ತಂಡಗಳ ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗಿದೆ.*
ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮಗಳ ತಂಡಗಳಿಗೆ ಭಾಗವಹಿಸಲು ಅವಕಾಶವಿದ್ದು,ಪ್ರವೇಶ ಶುಲ್ಕ ನೀಡಿ ತಂಡವನ್ನು ನೋಂದಣಿ ಮಾಡಿಕೊಳ್ಳಬಹುದು.
ನಗರಸಭಾ ವ್ಯಾಪ್ತಿಯ ತಂಡಗಳಿಗೂ ಅವಕಾಶವಿದೆ.
ತಂಡಗಳು ಪಂದ್ಯದ 15 ನಿಮಿಷ ಮುಂಚೆ ಹಾಜರಿರತಕ್ಕದ್ದು.ಮಾಹಿತಿಗಾಗಿ 9964244946,
7019243403 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕ್ರೀಡೆ ಮಾತ್ರವಲ್ಲದೇ ಶೈಕ್ಷಣಿಕ,ಸಾಂಸ್ಕೃತಿಕ,ಸಾಮಾಜಿಕ ಹೀಗೆ ವಿವಿಧ ಕ್ಷೇತ್ರಗಳಲ್ಲೂ ತಮ್ಮ ಸೇವೆಯನ್ನು ಸಲ್ಲಿಸುತ್ತಿರುವ ವೆಂಕಟರಮಣ ಸಂಸ್ಥೆ ಆಯೋಜಿಸುವ ಪ್ರತಿ ಪಂದ್ಯಾವಳಿಯಲ್ಲೂ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಾ ಬಂದಿದ್ದು,ಈ ಬಾರಿಯೂ ಡೋಪ್ ಟೆಸ್ಟಿಂಗ್,
ನೇತ್ರದಾನ ಶಿಬಿರ,ಪರಿಸರ ಸಂರಕ್ಷಣಾ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ.
M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 × 3 =