ಕ್ರಿಕೆಟ್ವಿಜಯ ಹಜಾರೆ ಟ್ರೋಫಿ 2025–26: ಕರ್ನಾಟಕ ತಂಡಕ್ಕೆ ಶ್ರೀಶ ಆಚಾರ್ ಆಯ್ಕೆ...

ವಿಜಯ ಹಜಾರೆ ಟ್ರೋಫಿ 2025–26: ಕರ್ನಾಟಕ ತಂಡಕ್ಕೆ ಶ್ರೀಶ ಆಚಾರ್ ಆಯ್ಕೆ – ಕರಾವಳಿ ಕ್ರಿಕೆಟ್‌ಗೆ ಹೆಮ್ಮೆ

-

- Advertisment -spot_img

ವಿಜಯ ಹಜಾರೆ ಟ್ರೋಫಿ 2025–26: ಕರ್ನಾಟಕ ತಂಡಕ್ಕೆ ಶ್ರೀಶ ಆಚಾರ್ – ಕರಾವಳಿ ಕ್ರಿಕೆಟ್‌ಗೆ ಹೆಮ್ಮೆ

ಬೆಂಗಳೂರು: ದೇಶದ ಪ್ರಮುಖ ಏಕದಿನ ಕ್ರಿಕೆಟ್ ಟೂರ್ನಿಯಾಗಿರುವ ಬಿಸಿಸಿಐ ವಿಜಯ ಹಜಾರೆ ಟ್ರೋಫಿ 2025–26 ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರಕಟಿಸಲಾಗಿದ್ದು, ಪ್ರತಿಭಾವಂತ ಸ್ಪಿನ್ ಬೌಲರ್ ಶ್ರೀಶ ಆಚಾರ್ ಅವರು ಆಯ್ಕೆಯಾಗಿರುವುದು ಕರಾವಳಿ ಹಾಗೂ ರಾಜ್ಯದ ಕ್ರಿಕೆಟ್ ವಲಯದಲ್ಲಿ ಸಂತಸ ಮೂಡಿಸಿದೆ.

ಕಠಿಣ ಪರಿಶ್ರಮ, ಶಿಸ್ತುಬದ್ಧ ಅಭ್ಯಾಸ ಹಾಗೂ ನಿರಂತರ ಉತ್ತಮ ಪ್ರದರ್ಶನದ ಫಲವಾಗಿ ಶ್ರೀಶ ಆಚಾರ್ ಗೆ ಈ ಮಹತ್ವದ ಅವಕಾಶ ಲಭಿಸಿದೆ. ರಾಜ್ಯ ಮಟ್ಟದ ಹಾಗೂ ವಿವಿಧ ಟೂರ್ನಿಗಳಲ್ಲಿ ತೋರಿದ ಗಮನಾರ್ಹ ಪ್ರದರ್ಶನವು ಆಯ್ಕೆ ಸಮಿತಿಯ ಗಮನ ಸೆಳೆದಿದ್ದು, ಇದೀಗ ಕರ್ನಾಟಕ ತಂಡದ ಜೆರ್ಸಿ ಧರಿಸಿ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಸಿದ್ಧರಾಗಿದ್ದಾರೆ.

ಕರ್ನಾಟಕ ತಂಡಕ್ಕೆ ಮಯಂಕ್ ಅಗರವಾಲ್ ನಾಯಕತ್ವ ವಹಿಸಿಕೊಂಡಿದ್ದು, ದೇವದತ್ತ ಪಡಿಕಲ್, ಕರೂಣ್ ನಾಯರ್, ಕೆ.ಎಲ್. ರಾಹುಲ್, ಪ್ರಸಿದ್ಧ ಕೃಷ್ಣ ಸೇರಿದಂತೆ ಅನುಭವಿ ಹಾಗೂ ಯುವ ಆಟಗಾರರ ಸಮತೋಲನದ ತಂಡ ರೂಪುಗೊಂಡಿದೆ. ಇಂತಹ ಬಲಿಷ್ಠ ತಂಡದಲ್ಲಿ ಶ್ರೀಶ ಆಚಾರ್ ರ ಸೇರ್ಪಡೆ ಬೌಲಿಂಗ್ ವಿಭಾಗಕ್ಕೆ ಇನ್ನಷ್ಟು ಬಲ ತುಂಬಲಿದೆ.

ಶ್ರೀಶ ಆಚಾರ್ ರ ಆಯ್ಕೆಗೆ ಅವರ ಕುಟುಂಬಸ್ಥರು, ಕೋಚ್‌ಗಳು, ಸ್ನೇಹಿತರು ಹಾಗೂ ಕ್ರಿಕೆಟ್ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದು, ಮುಂದಿನ ಪಂದ್ಯಗಳಲ್ಲಿ ಅವರು ಕರ್ನಾಟಕ ತಂಡಕ್ಕೆ ಮಹತ್ವದ ಕೊಡುಗೆ ನೀಡುವ ವಿಶ್ವಾಸವಿದೆ.

ರಾಜ್ಯದ ಕ್ರಿಕೆಟ್ ಕ್ಷೇತ್ರಕ್ಕೆ ಇದು ಹೆಮ್ಮೆಯ ಕ್ಷಣವಾಗಿದ್ದು, ಶ್ರೀಶ ಆಚಾರ್  ಅವರ ಅವರ ಮುಂದಿನ ಪಯಣಕ್ಕೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.

LEAVE A REPLY

Please enter your comment!
Please enter your name here

twenty − 18 =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you