ಕ್ರಿಕೆಟ್ವಿಜಯ್ ಹಜಾರೆ ಟ್ರೋಫಿ: ಬರೋಡ ಬೆಂಡೆತ್ತಿ ಸೆಮಿಫೈನಲ್ ಪ್ರವೇಶಿಸಿದ ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ: ಬರೋಡ ಬೆಂಡೆತ್ತಿ ಸೆಮಿಫೈನಲ್ ಪ್ರವೇಶಿಸಿದ ಕರ್ನಾಟಕ

-

- Advertisment -spot_img

ವಿಜಯ್ ಹಜಾರೆ ಟ್ರೋಫಿ: ಬರೋಡ ಬೆಂಡೆತ್ತಿ ಸೆಮಿಫೈನಲ್ ಪ್ರವೇಶಿಸಿದ ಕರ್ನಾಟಕ

ಮಯಾಂಕ್ ಅಗರ್ವಾಲ್ ನಾಯಕತ್ವದ ಕರ್ನಾಟಕ ತಂಡ, ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಸೆಮಿಫೈನಲ್’ಗೆ ಲಗ್ಗೆ ಇಟ್ಟಿದೆ.

ವಡೋದರದಲ್ಲಿ ಶನಿವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಆತಿಥೇಯ ಬರೋಡ ವಿರುದ್ಧ 5 ರನ್’ಗಳ ರೋಚಕ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡ ದೇವದತ್ತ್ ಪಡಿಕ್ಕಲ್ ಅವರ ಅಮೋಘ ಶತಕದ ನೆರವಿನಿಂದ ನಿಗದಿತ 50 ಓವರ್’ಗಳಲ್ಲಿ 8 ವಿಕೆಟ್ ನಷ್ಟಕ್ಕೆ 281 ರನ್’ಗಳ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿತು. ಆಸ್ಟ್ರೇಲಿಯಾ ಪ್ರವಾಸದಿಂದ ವಾಪಸ್ಸಾಗಿ ಕರ್ನಾಟಕ ತಂಡ ಸೇರಿಕೊಂಡ ದೇವದತ್ತ್ ಪಡಿಕ್ಕಲ್ ನಾಯಕ ಮಯಾಂಕ್ ಅಗರ್ವಾಲ್ ಜೊತೆ ಇನ್ನಿಂಗ್ಸ್ ಆರಂಭಿಸಿದರು. ಮಯಾಂಕ 6 ರನ್ನಿಗೆ ಔಟಾದರೂ, ಜವಾಬ್ದಾರಿಯುತ ಆಟವಾಡಿದ ಪಡಿಕ್ಕಲ್ 99 ಎಸೆತಗಳಲ್ಲಿ 15 ಬೌಂಡರಿ ಹಾಗೂ 2 ಸಿಕ್ಸರ್’ಗಳ ನೆರವಿನಿಂದ 102 ರನ್ ಗಳಿಸಿ ತಂಡಕ್ಕೆ ಆಸರೆಯಾದರು. 2ನೇ ವಿಕೆಟ್’ಗೆ ಕೆ.ವಿ ಅನೀಶ್ (64 ಎಸೆತಗಳಲ್ಲಿ 52 ರನ್) ಜೊತೆ 133 ರನ್ ಸೇರಿಸಿದ ಪಡಿಕ್ಕಲ್ ಕರ್ನಾಟಕದ ಸ್ಪರ್ಧಾತ್ಮಕ ಮೊತ್ತಕ್ಕೆ ಕಾರಣರಾದರು.

ನಂತರ 282 ರನ್’ಗಳ ಗುರಿ ಬೆನ್ನಟ್ಟಿದ ಬರೋಡ ಶಾಶ್ವತ್ ರಾವತ್ ಅವರ ಅಮೋಘ ಶತಕದ (126 ಎಸೆತಗಳಲ್ಲಿ 104 ರನ್) ನೆರವಿನಿಂದ ಒಂದು ಹಂತದಲ್ಲಿ ಸುಲಭ ಗೆಲುವಿನತ್ತ ಮುನ್ನಡೆದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕರ್ನಾಟಕ ಬೌಲರ್’ಗಳ ಸಂಘಟಿತ ದಾಳಿಗೆ ತತ್ತರಿಸಿ 49.5 ಓವರ್’ಗಳಲ್ಲಿ 276 ರನ್ನಿಗೆ ಆಲೌಟಾಗಿ 5 ರನ್ನಿಂದ ಸೋಲೊಪ್ಪಿಕೊಂಡಿತು. ಕರ್ನಾಟಕ ಪರ ಮಧ್ಯಮ ವೇಗಿ ವಿ.ಕೌಶಿಕ್ 10 ಓವರ್’ಗಳಲ್ಲಿ 39 ರನ್ನಿತ್ತು 2 ವಿಕೆಟ್ ಪಡೆದರೆ, ಆಲ್ರೌಂಡರ್ ಶ್ರೇಯಸ್ ಗೋಪಾಲ್ 10 ಓವರ್’ಗಳಲ್ಲಿ 38 ರನ್ನಿತ್ತು 2 ವಿಕೆಟ್ ಪಡೆಯುವ ಮೂಲಕ ಕರ್ನಾಟಕದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಪ್ರಸಿದ್ಧ್ ಕೃಷ್ಣ 60ಕ್ಕೆ 2 ಹಾಗೂ ಅಭಿಲಾಷ್ ಶೆಟ್ಟಿ 70ಕ್ಕೆ 2 ವಿಕೆಟ್ ಉರುಳಿಸಿದರು.

ಜನವರಿ 15ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಗುಜರಾತ್ ಮತ್ತು ಹರಿಯಾಣ ನಡುವಿನ ಕ್ವಾರ್ಟರ್ ಫೈನಲ್ ವಿಜೇತರನ್ನು ಎದುರಿಸಲಿದೆ.

LEAVE A REPLY

Please enter your comment!
Please enter your name here

ten + seventeen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you