ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟೆಸ್ಟ್ ಕರಿಯರ್ ಖತಂ?

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟೆಸ್ಟ್ ಕರಿಯರ್ ಖತಂ?

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟೆಸ್ಟ್ ಕರಿಯರ್ ಖತಂ?

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ನೀರಸ ಪ್ರದರ್ಶನ ತೋರಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಟೆಸ್ಟ್ ವೃತ್ತಿಜೀವನ ತೂಗುಯ್ಯಾಲೆಯಲ್ಲಿದೆ.

ಈ ಇಬ್ಬರೂ ಆಟಗಾರರು ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ಬಗ್ಗೆ ಅನುಮಾನಗಳಿವೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿಚಾರದಲ್ಲಿ ಖಡಕ್ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ಮುಂದಾಗಿದೆ. ಭಾನುವಾರ ಮುಂಬೈನಲ್ಲಿ ಬಿಸಿಸಿಐ ವಿಶೇಷ ವಾರ್ಷಿಕ ಮಹಾಸಭೆ ನಡೆಯಲಿದ್ದು, ಆ ಸಭೆಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಟೆಸ್ಟ್ ವೃತ್ತಿಜೀವನದ ಭವಿಷ್ಯದ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕೊಹ್ಲಿ ಮತ್ತು ರೋಹಿತ್ ಟೆಸ್ಟ್ ಭವಿಷ್ಯದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಸೂಚನೆ ನೀಡಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಡಿದ 5 ಇನ್ನಿಂಗ್ಸ್’ಗಳಲ್ಲಿ ರೋಹಿತ್ ಶರ್ಮಾ ಕೇವಲ 6.2 ಸರಾಸರಿಯಲ್ಲಿ 31 ರನ್ ಗಳಿಸಿದ್ದರು. ಕಳೆದ 10 ಟೆಸ್ಟ್ ಇನ್ನಿಂಗ್ಸ್’ಗಳಲ್ಲಿ ರೋಹಿತ್ ಶರ್ಮಾ ಒಂದೇ ಒಂದು ಅರ್ಧಶತಕವನ್ನೂ ಬಾರಿಸಿಲ್ಲ. ಮತ್ತೊಂದೆಡೆ ವಿರಾಟ್ ಕೊಹ್ಲಿ ಪರ್ತ್ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್’ನಲ್ಲಿ ಗಳಿಸಿದ ಶತಕ ಸಹಿತ ಅಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ 9 ಇನ್ನಿಂಗ್ಸ್’ಗಳಿಂದ 190 ರನ್ ಗಳಿಸಿದ್ದಾರೆ. ಆ ಶತಕವನ್ನು ಹೊರತು ಪಡಿಸಿದರೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಗಳಿಸಿರುವುದು ಕೇವಲ 90 ರನ್.

 

ಭಾರೀ ವೈಫಲ್ಯ ಎದುರಿಸಿರುವ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಟೆಸ್ಟ್ ತಂಡದಿಂದ ಕೈಬಿಟ್ಟು ಯುವ ಆಟಗಾರರಿಗೆ ಅವಕಾಶ ನೀಡಬೇಕೆಂಬ ಮಾತುಗಳು ಕೇಳಿ ಬರುತ್ತಿವೆ. ಭಾರತ ತಂಡ ಮುಂದಿನ ಜೂನ್ ತಿಂಗಳಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಆತಿಥೇಯರ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.

Leave a Reply

Your email address will not be published. Required fields are marked *