ಇಂದು ಭಾರತದ ಪ್ರತಿಷ್ಠೆಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆಯಲಿದ್ದು ಇದು ಹದಿಮೂರನೇ ಆವೃತ್ತಿಯ ಕೊನೆಯ ಪಂದ್ಯವಾಗಲಿದೆ.ಟೂರ್ನಿಯಲ್ಲಿ ಈವರೆಗೆ ಒಟ್ಟು 59 ಪಂದ್ಯಗಳು ನಡೆದಿದೆ.
ಕ್ವಾಲಿಫೈಯರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಫೈನಲ್ ಪ್ರವೇಶ ಪಡೆದ್ದಿದ್ದು ಅದಕ್ಕೂ ಮುನ್ನ ನಡೆದ ಮೊದಲನೇ ಕ್ವಾಲಿಫೈಯರ್‌ನಲ್ಲಿ ಮುಂಬೈ ಡೆಲ್ಲಿ ವಿರುದ್ಧ ಜಯಗಳಿಸಿ ಫೈನಲ್ ಪ್ರವೇಶಿಸಿತ್ತು.
ಹಿಂದಿನ ಎಲ್ಲಾ ಐಪಿಎಲ್ ಆವೃತ್ತಿಯಲ್ಲಿ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೆ 27 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ 15 ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ಗೆದ್ದಿದೆ. ದೆಹಲಿ ಕ್ಯಾಪಿಟಲ್ಸ್12 ಪಂದ್ಯಗಳಲ್ಲಿ ಜಯಗಳಿಸಿದೆ. ಈ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧ ಮುಂಬೈ ಮೂರು ಬಾರಿ ಜಯಗಳಿಸಿದೆ.
13 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಆರನೇ ಬಾರಿ ಮುಂಬೈ ಇಂಡಿಯನ್ಸ್ ಫೈನಲ್ ತಲುಪಿದೆ. ಈ ತಂಡವು ಈಗಾಗಲೇ ನಾಲ್ಕು ಬಾರಿ ಪ್ರಶಸ್ತಿಯನ್ನು ಜಯಿಸಿದೆ. ಹಾಗೆ ಡೆಲ್ಲಿ ಕ್ಯಾಪಿಟಲ್ಸ್ ಇದೇ ಮೊದಲು ಫೈನಲ್ ತಲುಪಿದ್ದು ಚೊಚ್ಚಲ ಐಪಿಎಲ್ ಪ್ರಶಸ್ತಿಗೆಲ್ಲಲು ಸಜ್ಜಾಗಿದೆ.