ಕ್ರಿಕೆಟ್ಒಂದೇ ಪಂದ್ಯದ ನಂತರ ರಣಜಿ ಪ್ಲೇಯಿಂಗ್ XIನಿಂದ ಅಭಿಲಾಷ್ ಶೆಟ್ಟಿ ಔಟ್,...

ಒಂದೇ ಪಂದ್ಯದ ನಂತರ ರಣಜಿ ಪ್ಲೇಯಿಂಗ್ XIನಿಂದ ಅಭಿಲಾಷ್ ಶೆಟ್ಟಿ ಔಟ್, ಇದು ಯಾವ ನ್ಯಾಯ?

-

- Advertisment -spot_img

ಒಂದೇ ಪಂದ್ಯದ ನಂತರ ರಣಜಿ ಪ್ಲೇಯಿಂಗ್ XIನಿಂದ ಅಭಿಲಾಷ್ ಶೆಟ್ಟಿ ಔಟ್, ಇದು ಯಾವ ನ್ಯಾಯ?

ಕರ್ನಾಟಕ ತಂಡ ರಣಜಿ ಟ್ರೋಫಿ ಟೂರ್ನಿಯ ತನ್ನ 5ನೇ ಲೀಗ್ ಪಂದ್ಯದಲ್ಲಿ ಉತ್ತರ ಪ್ರದೇಶ ತಂಡವನ್ನು ಎದುರಿಸಿ ನಿಂತಿದೆ. ರಣಜಿ ಟ್ರೋಫಿ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಉತ್ತರ ಪ್ರದೇಶ ತಂಡ ವಿ.ಕೌಶಿಕ್ರಂ ದಾಳಿಗೆ ತತ್ತರಿಸಿ ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡಿದೆ.

ಉತ್ತರ ಪ್ರದೇಶ ವಿರುದ್ಧ ಕಣಕ್ಕಿಳಿದಿರುವ ಕರ್ನಾಟಕ ತಂಡದ ಪ್ಲೇಯಿಂಗ್ ಇಲೆವೆನ್’ನಿಂದ ಪ್ರತಿಭಾವಂತ ಎಡಗೈ ಮಧ್ಯಮ ವೇಗದ ಬೌಲರ್ ಅಭಿಲಾಷ್ ಶೆಟ್ಟಿಯವರನ್ನು ಕೈಬಿಡಲಾಗಿದೆ. ಅಭಿಲಾಷ್ ಶೆಟ್ಟಿ ಬದಲು ಮತ್ತೊಬ್ಬ ಯುವ ಮಧ್ಯಮ ವೇಗಿ ಯಶೋವರ್ಧನ್ ಪರಂಟಪ್ ಕರ್ನಾಟಕ ಪರ ರಣಜಿ ಟ್ರೋಫಿ ಕ್ರಿಕೆಟ್’ಗೆ ಪಾದಾರ್ಪಣೆ ಮಾಡಿದ್ದಾರೆ.

26 ವರ್ಷದ ಅಭಿಲಾಷ್ ಶೆಟ್ಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬಂಗಾಳ ವಿರುದ್ಧದ ಪಂದ್ಯದ ಮೂಲಕ ರಣಜಿ ಕ್ರಿಕೆಟ್’ಗೆ ಪಾದಾರ್ಪಣೆ ಮಾಡಿದ್ದರು. ಆಡಿದ ಮೊದಲ ಪಂದ್ಯದಲ್ಲಿ ಮೂರು ವಿಕೆಟ್ ಪಡೆದಿದ್ದರು. ಆದರೆ ಒಂದೇ ಪಂದ್ಯದ ನಂತರ ಉತ್ತರ ಪ್ರದೇಶ ವಿರುದ್ಧದ ಪಂದ್ಯಕ್ಕೆ ತಂಡದ ಪ್ಲೇಯಿಂಗ್ ಇಲೆವೆನ್’ನಿಂದ ಅಭಿಲಾಷ್ ಶೆಟ್ಟಿಯವರನ್ನು ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಗಾಯದ ಕಾರಣ ಅಭಿಲಾಷ್ ಶೆಟ್ಟಿಯವರನ್ನು ಆಡುವ ಬಳಗದಿಂದ ಹೊರಗಿಡಲಾಗಿದೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬುದು ಖಚಿತ ಪಟ್ಟಿಲ್ಲ.

LEAVE A REPLY

Please enter your comment!
Please enter your name here

twelve − four =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you