ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ದಿನಾಂಕ 28.10.2023 ಮತ್ತು 29.10.2023 ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಒಕ್ಕೂಟದ ನಿರ್ದೇಶಕರಾದ ಶ್ರೀ ಪ್ರವೀಣ್ ಶೆಟ್ಟಿ ವಕ್ವಾಡಿಯವರನ್ನು ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಪರವಾಗಿ ಹೂಗುಚ್ಚ ನೀಡಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದರು.
ಅಧ್ಯಕ್ಷರ ಆದರದ ಆಹ್ವಾನ ಸ್ವೀಕರಿಸಿದ ಶ್ರೀ ಪ್ರವೀಣ್ ಶೆಟ್ಟಿ ವಕ್ವಾಡಿಯವರು ತನ್ನ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.