6 ವಿಶ್ವದಾಖಲೆಯ ಸರದಾರಿಣಿ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಯೋಗರತ್ನ ತನುಶ್ರೀ ಪಿತ್ರೋಡಿ 7 ನೇ ವಿಶ್ವದಾಖಲೆಯ ಪ್ರಯತ್ನವಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಕಡಿಮೆ ಅವಧಿಯಲ್ಲಿ ಅತ್ಯಂತ ಗರಿಷ್ಠ(200)ಯೋಗ ಭಂಗಿಗಳ ಪ್ರದರ್ಶನವನ್ನು ನೀಡಲಿದ್ದಾರೆ.
ಗುರುಗಳಾದ ರಾಮಕೃಷ್ಣ ಕೊಡಂಚ,ಯೋಗ ಗುರು ನರೇಂದ್ರ ಕಾಮತ್ ಕಾರ್ಕಳ ಹಾಗೂ ಪರೀಕ ಎಸ್.ಡಿ.ಎಂ ನ ಡಾ.ಶೋಭಿತ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ಆಗಸ್ಟ್ 15 ರಂದು ಮಧ್ಯಾಹ್ನ 2.30 ಕ್ಕೆ ಸರಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಈ ದಾಖಲೆಯನ್ನು ಮಾಡಲಾಗುವುದು ಎಂದು ತನುಶ್ರೀ ಪಿತ್ರೋಡಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಈ ಸಂದರ್ಭ ಮಾತನಾಡಿದ ತನುಶ್ರೀ ತಂದೆ ಉದಯ್ ಕುಮಾರ್ ,ಅಭ್ಯಾಸದ ಸಮಯದಲ್ಲಿ ತನುಶ್ರೀ 45 ನಿಮಿಷದಲ್ಲಿ 200 ಭಂಗಿಗಳನ್ನು ಪ್ರದರ್ಶನ ಮಾಡುತ್ತಿದ್ದು,ಇನ್ನಷ್ಟು ಕಡಿಮೆ ಅವಧಿಯಲ್ಲಿ ಈ ಸಾಧನೆ ಮಾಡುವ ಪ್ರಯತ್ನ ಮಾಡಲಿದ್ದಾಳೆ.ಈ ದಾಖಲೆಯ ಸಂದರ್ಭದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ನ ಅಧಿಕಾರಿ ಮನೀಷ್ ಬಿಷ್ಣೋಯಿ ಭಾಗವಹಿಸಲಿದ್ದು,ಕಾರ್ಯಕ್ರಮದಲ್ಲಿ ಐವರು ಭಾರತೀಯ ಯೋಧರಿಗೆ ಗೌರವಾರ್ಪಣೆ ಸಲ್ಲಿಸಲಾಗುವುದು ಎಂದರು.
ಸುದ್ದಿಗೋಷ್ಟಿಯಲ್ಲಿ ವಿಜಯ್ ಕೋಟ್ಯಾನ್ ಪಿತ್ರೋಡಿ ಹಾಗೂ ಸುರಭಿ ರತನ್ ಉಪಸ್ಥಿತರಿದ್ದರು.